NATIONAL NEWS | 8 MAY 2021
ಕೋವಿಡ್ ನಿಯಮ ಉಲ್ಲಂಘಿಸಿ ಸೋಂಕಿತನ ಅಂತ್ಯಕ್ರಿಯೆ ನೆರವೇರಿಸಿದ ಕೆಲವೆ ದಿನದಲ್ಲಿ, 21 ಮಂದಿ ಮೃತಪಟ್ಟಿದ್ದಾರೆ. ಎಲ್ಲರೂ ಸೋಂಕಿನಿಂದ ಮೃತಪಟ್ಟಿರುವ ಬಗ್ಗೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಆದರೆ ಅಧಿಕಾರಿಗಳು ಮಾತ್ರ ಬೇರೆಯದ್ದೇ ವಾದ ಮಂಡಿಸುತ್ತಿದ್ದಾರೆ.
ರಾಜಸ್ಥಾನದ ಸಿಕಾರ್ ಜಿಲ್ಲೆಯ ಖೀರ್ವಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಏಪ್ರಿಲ್ 21ರಂದು ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಯೊಬ್ಬನ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಈ ವೇಳೆ ಶವವನ್ನು ಪ್ಲಾಸ್ಟಿಕ್ ಚೀಲದಿಂದ ಹೊರ ತೆಗೆಯಲಾಗಿತ್ತು. ಹಲವರು ಮೃತದೇಹವನ್ನು ಮುಟ್ಟಿದ್ದರು.
ಗ್ರಾಮದ ಹಲವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮೇ 5ರವರೆಗೆ 21 ಮಂದಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿನ ಅಧಿಕಾರಿಗಳು, ನಾಲ್ವರು ಮಾತ್ರ ಕರೋನದಿಂದ ಸಾವನ್ನಪ್ಪಿದ್ದಾರೆ. ಉಳಿದವರದ್ದು ವಯೋಸಹಜ ಸಾವು ಎಂದು ವರದಿ ನೀಡಿದ್ದಾರೆ.
ಸದ್ಯ ಗ್ರಾಮದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಗ್ರಾಮಸ್ಥರಿಗೆ ಸೋಂಕಿನ ಕುರಿತು ಮಾಹಿತಿ ನೀಡಲಾಗಿದೆ.