ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
NATIONAL NEWS | 9 MAY 2021
ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಕರೋನ ಸೋಂಕನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆರೋಪಿಸಿದೆ.
ಕರೋನ ಎರಡನೆ ಅಲೆಯನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆಯು ನಿರುತ್ಸಾಹ ತೋರಿಸಿದೆ. ಶೀಘ್ರ ಸೂಕ್ತ ಕೈಗೊಳ್ಳಬೇಕು ಎಂದು ಐಎಂಎ ಆಗ್ರಹಿಸಿದೆ.
ಆರೋಗ್ಯ ಮೂಲ ಸೌಕರ್ಯ ಹೆಚ್ಚಿಸುವುದು ಮತ್ತು ಪೂರ್ವಯೋಜಿತ ರಾಷ್ಟ್ರೀಯ ಲಾಕ್ ಡೌನ್ ಘೋಷಿಸುವಂತೆ ಕಳೆದ 20 ದಿನದಿಂದ ಐಎಂಎ ಆಗ್ರಹಿಸುತ್ತಿದೆ. ಆದರೆ ಐಎಂಎ ಮನವಿಯನ್ನು ಕಸದ ಬುಟ್ಟಿಗೆ ಹಾಕಲಾಗಿದೆ. ಇದರ ಪರಿಣಮ ಕರೋನ ವ್ಯಾಪಕವಾಗಿ ಹರಡುತ್ತಿದೆ.
ಪ್ರತಿದಿನ ನಾಲ್ಕು ಲಕ್ಷಕ್ಕೂ ಅಧಿಕ ಸೋಂಕಿತರು ದಾಖಲಾಗುತ್ತಿದ್ದಾರೆ. ಗಂಭೀರ ಪ್ರಕರಣ ಸಂಖ್ಯೆ ಶೇ.40ಕ್ಕೆ ಹೆಚ್ಚಳವಾಗಿದೆ. ರಾತ್ರಿ ಕರ್ಫ್ಯೂನಿಂದ ಯಾವುದೆ ಪ್ರಯೋಜನವಾಗುತ್ತಿಲ್ಲ. ಈ ಕುರಿತು ಇನ್ನಾದರೂ ಕೇಂದ್ರ ಆರೋಗ್ಯ ಇಲಾಖೆ ಕಠಿಣ ಕ್ರಮದತ್ತ ಯೋಚಿಸಬೇಕಿದೆ ಎಂದು ಐಎಂಎ ಆಗ್ರಹಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422