ಇನ್ಮುಂದೆ ದೆಹಲಿಯಲ್ಲು ಸಿಗುತ್ತೆ ನಂದಿನಿ ಹಾಲು

NATIONAL NEWS : ಇನ್ಮುಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯು ನಂದಿನಿ (Nandini) ಉತ್ಪನ್ನಗಳು ದೊರೆಯಲಿದೆ. ದೆಹಲಿಯಲ್ಲಿ ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಶ್ರೇಣಿಯ ಹಾಲಿನ ಪ್ಯಾಕೆಟ್‌ಗಳನ್ನು ಬಿಡುಗಡೆ ಮಾಡಿ ಮಾರಾಟಕ್ಕೆ ಚಾಲನೆ ನೀಡಿದರು.

ದೆಹಲಿಯಲ್ಲಿ ಪ್ರತಿದಿನ 1 ಲಕ್ಷ ಲೀಟರ್‌ ಹಾಲು ಮಾರಾಟ ಮಾಡುವ ಗುರಿ ಹೊಂದಲಾಗಿದೆ. ಇನ್ನು ಆರು ತಿಂಗಳ ಒಳಗೆ 2.5 ಲಕ್ಷ ಲೀಟರ್‌ ಹಾಲು ಮಾರಾಟಕ್ಕೆ ಯೋಜಿಸಲಾಗಿದೆ. ಈಗಾಗಲೇ 100ಕ್ಕೂ ಹೆಚ್ಚು ವಿತರಕರ ಜೊತೆಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌) ಒಪ್ಪಂದ ಮಾಡಿಕೊಂಡಿದೆ.

ಈಗಾಗಲೇ ನಂದಿನಿ ಬ್ರ್ಯಾಂಡ್‌ನ ಹಾಲು ಮತ್ತು ಹಾಲಿನ ಉತ್ಪನ್ನಗಳು ಮುಂಬೈ, ನಾಗಪುರ, ಪುಣೆ ಮತ್ತು ಸೋಲಾಪುರ, ಗೋವಾ, ಹೈದರಾಬಾದ್‌, ಚೆನ್ನೈ, ಕೇರಳದ ರಾಜ್ಯಗಳಲ್ಲಿ ಮಾರಾಟವಾಗುತ್ತಿವೆ.

Nandini-Milk-logo-general-image

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment