ಇನ್ನು ನರೇಗಾ ಯೋಜನೆ ಸ್ಥಗಿತ, ಹೊಸ ಯೋಜನೆ ಅನುಷ್ಠಾನದ ದಿನಾಂಕ ಪ್ರಕಟಿಸಿದ ಕೇಂದ್ರ

ಹೊಸದಿಲ್ಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಬದಲಿಗೆ ಕೇಂದ್ರ ಸರ್ಕಾರ ರೂಪಿಸಿರುವ ಹೊಸ ವಿಕಸಿತ ಭಾರತ ಗ್ರಾಮೀಣ ಉದ್ಯೋಗ ಮತ್ತು ಜೀವನೋಪಾಯ ಯೋಜನೆ (VB-GIRAM JI) ಕಾಯಿದೆಯು ಜುಲೈ 1ರಿಂದ ಅನುಷ್ಠಾನಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಸಚಿವಾಲಯವು (Ministry of Rural Development) ಈಗಾಗಲೇ ಅಧಿಸೂಚನೆ (Official notification) ಹೊರಡಿಸಿದ್ದು, ಜುಲೈ 1ರಿಂದ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಹೊಸ ಕಾಯಿದೆ (New Act) ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದೆ.

National-News-General-Image

ವಾರ್ಷಿಕ ಉದ್ಯೋಗ ಖಾತರಿಯನ್ನು ಈಗಿರುವ 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು (Government scheme) ಸಮರ್ಥಿಸಿಕೊಂಡಿದೆ. ಇದರಿಂದ ಗ್ರಾಮೀಣ ಭಾಗದ ಆರ್ಥಿಕತೆಗೆ (Rural economy) ಹೆಚ್ಚಿನ ಬಲ ಸಿಗಲಿದೆ ಎಂದು ಹೇಳಲಾಗಿದೆ.

ಆದರೆ, ಹೊಸ ಯೋಜನೆಯಿಂದಾಗಿ ರಾಜ್ಯಗಳ ಮೇಲಿನ ಆರ್ಥಿಕ ಹೊರೆ (Financial burden) ಹೆಚ್ಚಾಗಲಿದೆ ಎಂದು ಪ್ರತಿಪಕ್ಷಗಳು ಹಾಗೂ ವಿವಿಧ ರಾಜ್ಯ ಸರ್ಕಾರಗಳು ಆರೋಪಿಸಿವೆ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 12, 2026 at 11:40 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 12, 2026