ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 JUNE 2024
NATIONAL NEWS : 18ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನ (Session) ಇಂದಿನಿಂದ ಆರಂಭವಾಗಲಿದೆ. ಮೊದಲ 2 ದಿನ ಎಲ್ಲ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಹಂಗಾಮಿ ಸ್ಪೀಕರ್ ಆಗಿ ಹಿರಿಯ ಸಂಸದ
18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಹಿರಿಯ ಸಂಸದ ಭತೃಹರಿ ಮೆಹ್ತಾಬ್ ಅವರನ್ನು ನೇಮಿಸಲಾಗಿದೆ. ಇವತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆಯ ಹಂಗಾಮಿ ಸ್ಪೀಕರ್‌ಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಆ ಬಳಿಕ ಕಲಾಪದಲ್ಲಿ ಎಲ್ಲ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಬೋಧಿಸಲಿದ್ದಾರೆ.
ಎನ್‌ಡಿಎ ಸರ್ಕಾರಕ್ಕೆ ಅಗ್ನಿಪರೀಕ್ಷೆ
ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೊದಲ ಅಗ್ನಿಪರೀಕ್ಷೆಗೆ ಸಜ್ಜಾಗಿದೆ. ನೀಟ್ ಪರೀಕ್ಷ ಮತ್ತು ಎನ್‌ಇಟಿ ಪರೀಕ್ಷೆ ಅಕ್ರಮಗಳು, ರೈಲು ಅಪಘಾತಗಳು ಸೇರಿದಂತೆ ಪ್ರಮುಖ ಸಂಗತಿಗಳ ಕುರಿತು ಸರ್ಕಾರದ ವಿರುದ್ಧ ಮುಗಿಬೀಳಲು ವಿರೋಧ ಪಕ್ಷಗಳು ಸಜ್ಜಾಗಿವೆ.
ಇದನ್ನೂ ಓದಿ – ಯುವತಿಗೆ ವಂಚನೆ, ಹಸೆಮಣೆ ಏರಲು ಸಜ್ಜಾಗಿದ್ದ ಸಾಗರ ಬಿಜೆಪಿ ಮುಖಂಡ ಅರೆಸ್ಟ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422