NEWS HIGHLIGHTS
ಮಳೆ ವರದಿ: ದೇಶದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಾರುತಗಳು ಜೂನ್ 4ರಂದು ಕೇರಳಂ ಪ್ರವೇಶಿಸಿವೆ. ಇದರೊಂದಿಗೆ ದೇಶದಲ್ಲಿ ಅಧಿಕೃತವಾಗಿ ಮಳೆಗಾಲ ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿದೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಜೂನ್ 1ರಂದು ಮುಂಗಾರು ಕೇರಳಂ ಪ್ರವೇಶಿಸಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಮೂರು ದಿನ ತಡವಾಗಿ ಪ್ರವೇಶಿಸಿದೆ.

ಭಾರಿ ಮಳೆ ಮುನ್ನೆಚ್ಚರಿಕೆ
ಮುಂಗಾರು ಆಗಮನದ ಹಿನ್ನೆಲೆ ಕೇರಳಂನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಅನುಕೂಲಕರ ವಾತಾವರಣ ಇರುವುದರಿಂದ ಮುಂಗಾರು ಮಾರುತಗಳು ಮುಂದಿನ ದಿನಗಳಲ್ಲಿ ದೇಶದ ಇತರ ಭಾಗಗಳಿಗೆ ವಿಸ್ತರಿಸಲಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.