ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021
ಕರೋನ ಕಾರಣದಿಂದಾಗಿ ಕಳೆಗುಂದಿದ್ದ ದಸರಾ ಆಚರಣೆ ಈ ಭಾರಿ ಕಳೆಗಟ್ಟಿದೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವೈಭವದಿಂದ ನವರಾತ್ರಿ ಅಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಡಹಬ್ಬ ಆಚರಣೆಗೆ ಇವತ್ತಿನಿಂದ ಚಾಲನೆ ಸಿಗಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ವೈಭವದ ದಸರಾ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇವತ್ತು ಬೆಳಗ್ಗೆ 11 ಗಂಟೆಗೆ ಯಕ್ಷಗಾನ ಕಲಾವಿದ ಶಿವಕುಮಾರ್ ಬೇಗಾರ್ ಅವರು ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಾಲನೆ ನೀಡಲಿದ್ದಾರೆ.
ತೀರ್ಥಹಳ್ಳಿ, ಭದ್ರಾವತಿಯಲ್ಲೂ ದಸರಾ
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಮತ್ತು ಭದ್ರಾವತಿ ನಗರಸಭೆ ವತಿಯಿಂದಲೂ ಸಾರ್ವಜನಿಕ ದಸರಾ ಉತ್ಸವಗಳನ್ನು ಆಯೋಜಿಸಲಾಗಿದೆ. ವೈಭವದಿಂದ ದಸರಾ ಆಚರಣೆಗೆ ಸಿದ್ಧತೆಗಳು ಪೂರ್ಣಗೊಂಡಿವೆ.
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲೂ ನವರಾತ್ರಿ ಆಚರಿಸಲಾಗುತ್ತಿದೆ. ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಗೌರಿಗದ್ದೆಯ ಶ್ರೀ ವಿನಯ್ ಗುರೂಜಿ ಅವರು ಪಾಲ್ಗೊಳ್ಳಲಿದ್ದಾರೆ.
ಶಿವಮೊಗ್ಗದ ರವೀಂದ್ರನಗರ ಪ್ರಸನ್ನಗಣಪತಿ ದೇಗುಲದಲ್ಲಿ ನಿತ್ಯ ಚಂಡಿಕಾಯಾಗ, ಲಲಿತಾ ಸಹಸ್ರನಾಮ ಸ್ತೋತ್ರ ಪಠಣ, ಭಜನೋತ್ಸವ, ದೇವಿ ಭಾಗವತ ಪುರಾಣ ಪ್ರವಚನ ಹಾಗೂ ಸ್ಥಳೀಯ ಕಲಾವಿದರಿಂದ ಯಕ್ಷಗಾನ ನಡೆಯಲಿದೆ.
ಆದಿಚುಂಚನಗಿರಿ ಶಾಖಾ ಮಠದಲ್ಲೂ ನವರಾತ್ರಿಯನ್ನು ವೈಭವದಿಂದ ಆಚರಿಸಲಾಗುತ್ತಿದೆ. ಕಾಲ ಭೈರವೇಶ್ವರ ಹಾಗೂ ಕಾಳಿಕಾಂಬ ದೇವಿ ಸನ್ನಿಧಿಯಲ್ಲಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪ್ರತಿದಿನ ದುರ್ಗಾ ಹೋಮ, ದೇವಿಗೆ ವಿವಿಧ ಅಲಂಕಾರ ನೆರವೇರಲಿದೆ. ಪ್ರತಿದಿನ ಸಂಜೆ 6.15ರಿಂದ 7.20ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಾಗರದಲ್ಲಿ ಅದ್ಧೂರಿ ಆಚರಣೆ
ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿಯ ಎರಡು ದೇಗುಲಗಳಲ್ಲಿ ನವರಾತ್ರಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ದೇವಿಗೆ ವಿವಿಧ ಅಲಂಕಾರ ಮಾಡಲಾಗುತ್ತದೆ. ಕಾರ್ಯಕ್ರಮಕ್ಕಾಗಿ ಬೃಹತ್ ಪೆಂಡಾಲ್ ಹಾಕಲಾಗಿದೆ.
ಹೊಸಗುಂದದ ಶ್ರೀ ಉಮಾಮಹೇಶ್ವರ ದೇವಾಲಯದ ನಗರಿ ಆವರಣದಲ್ಲಿ ಕಂಚಿ ಕಾಳಮ್ಮ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಪ್ರತಿ ದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅ.7ರಿಂದ ದೇವಿಗೆ ವಿವಿಧ ಅಲಂಕಾರ ಮಾಡಲಾಗುತ್ತದೆ.
ಆಯನೂರಿನ ಚಾಮುಂಡಿಪುರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇಗುಲದಲ್ಲಿ ನವರಾತ್ರಿ ಆಯೋಜಿಸಲಾಗಿದೆ. ದೇವಿಗೆ ನಿತ್ಯ ವಿಶೇಷ ಅಲಂಕಾರ ಮಾಡಲಾಗುತ್ತದೆ. ಪಂಚಾಮೃತ ಅಭಿಷೇಕ ಮಾಡಿ, ದುರ್ಗಾ ಸಹಸ್ರನಾಮ, ದುರ್ಗಾಜಪ, ಸಪ್ತಶಿಶಿ ಪಾರಾಯಣ ಮತ್ತು ಮಹಾಮಂಗಳಾರತಿ ಮಾಡಲಾಗುತ್ತದೆ.
ಶಿಕಾರಿಪುರ ತಾಲೂಕು ತೊಗರ್ಸಿಯಲ್ಲಿ ಕ್ಷೇತ್ರಾಧಿಪತಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಅ.7ರಂದು ಕಂಕಣ ಧಾರಣೆಯ ನಂತರ ನವರಾತ್ರಿ ವಿಶೇಷ ಪೂಜೆ, ಉತ್ಸವಗಳು ನೆರವೇರಲಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200