ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 5 ಮೇ 2020
ಲಾಕ್‍ಡೌನ್ ಸಡಿಲಿಕೆ ಮಾಡಿದ್ದರೂ, ಮಾರುಕಟ್ಟೆಯಲ್ಲಿ ಜನಸಂದಣಿಯನ್ನು ತಪ್ಪಿಸಲು ಗಾಂಧಿ ಬಜಾರ್ ಹಾಗೂ ದುರ್ಗಿಗುಡಿ ರಸ್ತೆಗಳಲ್ಲಿ ಒಂದು ಬದಿಯ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗುವುದು ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೂಡಾ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಲಾಕ್‍ಡೌನ್ ಸಡಿಲಿಕೆಯಾಗಿದೆ ಎಂದ ತಕ್ಷಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗೆ ಇಳಿದಿರುವುದು ಅಪಾಯಕಾರಿ. ಹಸಿರು ವಲಯದಲ್ಲಿದ್ದ ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಇದೀಗ 30ಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಒಂದು ಪಾಸಿಟಿವ್ ಪ್ರಕರಣ ವರದಿಯಾದರೆ ಇಡೀ ನಗರದಲ್ಲಿ ಪುನಃ ಲಾಕ್‍ಡೌನ್ ಕಠಿಣಗೊಳ್ಳಲಿದೆ. ಜನರು ಇದನ್ನು ಅರಿತು ಅಗತ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರ ಬರಬೇಕು. ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲೆಯಲ್ಲಿ ಪ್ರಸ್ತುತ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ಮದ್ಯದಂಗಡಿಗಳಿಗೆ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಅವಕಾಶ ಇದೆ. ತಾಲೂಕು ಕೇಂದ್ರಗಳಿಗೆ KSRTC ಬಸ್ ಬೆಳಿಗ್ಗೆ 7 ರಿಂದ 10 ಹಾಗೂ ಸಂಜೆ 4 ರಿಂದ 7ರವರೆಗೆ ಸಂಚರಿಸಲಿದೆ. ಸೆಲೂನ್, ಬ್ಯೂಟಿಪಾರ್ಲರ್‌ಗಳು ತೆರೆಯಲು ಅನುಮತಿ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]