ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾಗಿ ನಿಖಿಲ್.ಬಿ (Nikhil IPS) ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಸದ್ಯ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ನಿಖಿಲ್ ಅವರು ನೂತನ ವರ್ಷದ ಮೊದಲ ದಿನದಿಂದಲೇ ಶಿವಮೊಗ್ಗದಲ್ಲಿ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆ ಇದೆ.

ಯಾರು ನಿಖಿಲ್? ಇಲ್ಲಿದೆ ಅವರ ಕುರಿತ ಪ್ರಮುಖಾಂಶ
ಐಪಿಎಸ್ ಅಧಿಕಾರಿ ನಿಖಿಲ್.ಬಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಬೆಳೆದಿದ್ದೆಲ್ಲ ಬೆಂಗಳೂರಿನಲ್ಲಿ. ಮೆಕಾನಿಕಲ್ ಇಂಜಿನಿಯರಿಂಗ್ ಪದವಿ ಹೊಂದಿದ್ದಾರೆ.
2017ರ ಬ್ಯಾಚ್‌ನ ಐಪಿಎಸ್ ಅಧಿಕಾರಿ. ರಾಯಚೂರಿನಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಎಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದರು. ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಮತ್ತು ಕರಾವಳಿ ಭದ್ರಾತಾ ಪಡೆಯಲ್ಲಿ ಜವಾಬ್ದಾರಿ ನಿಭಾಯಿಸಿದ್ದರು.
ಎರಡು ವರ್ಷ ಎಂಟು ತಿಂಗಳು ರಾಯೂಚೂರು ಜಿಲ್ಲಾ ರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಒಂದೂವರೆ ವರ್ಷದಿಂದ ಕೋಲಾರ ಜಿಲ್ಲಾ ರಕ್ಷಣಾಧಿಕಾರಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






