ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 8 ಜನವರಿ 2020
ವಿವಿಧ ಕಾರ್ಮಿಕ ಮತ್ತು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್’ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿವಮೊಗ್ಗ ಸಹಜ ಸ್ಥಿತಿಯಲ್ಲಿದೆ. ಆದರೆ ಯಾವುದೆ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.
ಬಸ್ಸು, ಆಟೋ, ಟ್ಯಾಕ್ಸಿ
ಶಿವಮೊಗ್ಗದಲ್ಲಿ ಬೆಳಗ್ಗೆಯಿಂದಲೇ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳು ರಸ್ತೆಗಿಳಿದಿವೆ. ಇವುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಇನ್ನು, ಆಟೋ ಮತ್ತು ಟ್ಯಾಕ್ಸಿಗಳು ಎಂದಿನಂತೆಯೇ ಸಂಚರಿಸುತ್ತಿವೆ. ಪ್ರಯಾಣಿಕರ ಸಂಖ್ಯೆಯು ಸಾಮಾನ್ಯ ದಿನದಂತೆಯೇ ಇದೆ.
ಸ್ಕೂಲು, ಕಾಲೇಜಿಗೆ ರಜೆ ಇಲ್ಲ
ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಹಾಗಾಗಿ ಇವತ್ತು ಎಲ್ಲ ಶಾಲೆ, ಕಾಲೇಜುಗಳು ಎಂದಿನಂತೆಯೇ ನಡೆಯಲಿದೆ. ‘ಯಾವುದೇ ಶಾಲೆ, ಕಾಲೇಜುಗಳಿಗೆ ರಜೆ ಇಲ್ಲ’ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಆಸ್ತಿಪಾಸ್ತಿ ಹಾನಿಗೊಳಿಸಿದರೆ ಕ್ರಮ
ಇನ್ನು, ಶಿವಮೊಗ್ಗದಲ್ಲಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿವೆ. ‘ಪ್ರತಿಭಟನೆ ವೇಳೆ ಆಸ್ತಿಪಾಸ್ತಿಗೆ ಹಾನಿಗೊಳಿಸಲು ಪ್ರಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಸಿದ್ದಾರೆ. ಇನ್ನು, ‘ವಿವಿಧ ಸಂಘಟನೆಗಳು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ತಾಲೂಕು ಆಡಳಿತದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422