ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಮೇ 2020
ಕಳೆದ ಮೂರು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೂ ಕರೋನ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿಲ್ಲದೆ ಇರುವುದು ಜಿಲ್ಲಾಡಳಿತ ಮತ್ತು ಜನರು ನಿಟ್ಟುಸಿರು ಬಿಡುವಂತೆ ಮಾಡಿದೆ. ಈ ನಡುವೆ ಸೋಂಕಿತ ನಾಲ್ಕು ಮಂದಿ ಗುಣವಾಗಿ ಮನೆ ಸೇರಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
ಒಂದೇ ಒಂದು ಪಾಸಿಟಿವ್ ಇಲ್ಲ
ಜಿಲ್ಲೆಯಾದ್ಯಂತ ಕಳೆದ ಮೂರು ದಿನದಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಕಂಟೈನ್ಮೆಂಟ್ ಜೋನ್‍ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಯಲು ಸಾಧ್ಯವಾಗಿದೆ. ಅಲ್ಲದೆ ಲಾಕ್‍ಡೌನ್ ಆರಂಭವಾದಾಗಿನಿಂದ ಈತನಕ ಬೇರೆ ಜಿಲ್ಲೆ ಮತ್ತು ಹೊರ ರಾಜ್ಯದಿಂದ ಬಂದವರನ್ನು ಯಶಸ್ವಿಯಾಗಿ ಕ್ವಾರಂಟೈನ್‍ಗೆ ಒಳಪಡಿಸಿದ್ದರಿಂದ ಇವತ್ತು ಜಿಲ್ಲೆಯ ಜನರು ನೆಮ್ಮೆದಿಯ ನಿಟ್ಟಿಸಿರು ಬಿಡುವಂತಾಗಿದೆ.

ಆತಂಕ ಹುಟ್ಟಿಸಿದ್ದ ಮೂರು ಕೇಸ್
ಮುಂಬೈನಿಂದ ತೀರ್ಥಹಳ್ಳಿಯ ಹಳ್ಳಿಬೈಲು ಗ್ರಾಮಕ್ಕೆ ಆಗಮಿಸಿದ್ದ ವ್ಯಕ್ತಿಗೆ ಕರೋನ ಪಾಸಿಟಿವ್ ಬಂದ ಪ್ರಕರಣ ಶಿವಮೊಗ್ಗ ಜಿಲ್ಲಾಡಳಿತಕ್ಕೆ ತೀವ್ರ ತಲೆನೋವು ತಂದಿತ್ತು. ಆದರೆ ಅದಕ್ಕಿಂತಲೂ ಆತಂಕು ಹುಟ್ಟಿಸಿದ್ದು ಶಿಕಾರಿಪುರದ ತರಲಘಟ್ಟ ಕೇಸ್, ಸೊರಬದ ಹಳೆ ಸೊರಬ ಕೇಸ್ ಮತ್ತು ಶಿವಮೊಗ್ಗದ ತುಂಗಾ ನಗರದ ಪ್ರಕರಣಗಳು. ಇವುಗಳಲ್ಲಿ ಪ್ರಾಥಮಿಕ ಮತ್ತು ಎರಡನೆ ಹಂತದ ಸಂಪರ್ಕಿತರನ್ನು ಪತ್ತೆ ಹಚ್ಚುವುದು ಕಷ್ಟಕರವಾಗಿತ್ತು. ಆದರೆ ಈ ಪ್ರಕರಣ ಸಂಬಂಧ ಕಂಟೈನ್ಮೆಂಟ್ ಜೋನ್‍ಗಳಲ್ಲಿ ಭದ್ರತೆ ಮತ್ತು ಪರೀಕ್ಷೆಯನ್ನು ಬಿಗಿಗೊಳಿಸಿದ್ದರಿಂದ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಕುಸಿತ ಕಂಡಿದೆ.
‘ಕರೋನ ವಿರುದ್ಧದ ಹೋರಾಟದ ತಂತ್ರವನ್ನು ಬದಲಿಸಿಕೊಂಡಿಲ್ಲ. ಆತಂಕ ಹುಟ್ಟಿಸಿದ್ದ ಎರಡು ಕೇಸ್‍ಗಳಲ್ಲಿ ಪ್ರಾಥಮಿಕ ಸಂಪರ್ಕಿತರನ್ನು ಬೇಗ ಗುರುತಿಸಿ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಕಂಟೈನ್ಮೆಂಟ್ ಜೋನ್‍ಗಳನ್ನು ಕಟ್ಟುನಿಟ್ಟಾಗಿ ರೂಪಿಸಿದ್ದೇವೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200