ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MAY 2021
ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಶಿವಮೊಗ್ಗ ಜಿಲ್ಲೆಯಾದ್ಯಂತ ಒಂದು ವಾರ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇ 31ರಿಂದ ಜೂನ್ 7ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಲಾಕ್‌ಡೌನ್ ಅವಧಿಯಲ್ಲಿ ಬ್ಯಾಂಕ್ ಸೇರಿದಂತೆ ಎಲ್ಲಾ ರೀತಿಯ ಚಟುವಟಿಕೆಗೂ ನಿರ್ಬಂಧ ವಿಧಿಸಲಾಗಿದೆ. ಹಾಗಾಗಿ ಜನ ರಸ್ತೆಗಿಳಿಯಲು ಅವಕಾಶವಿಲ್ಲ. ಮೇ 31ರ ಬೆಳಗ್ಗೆಯಿಂದಲೆ ಕಠಿಣ ನಿಯಮ ಜಾರಿಗೆ ಬರಲಿದೆ ಎಂದರು.