ಶಿವಮೊಗ್ಗ ಸೇರಿ 7 ಜಿಲ್ಲೆಗಳಿಗೆ ಇವತ್ತು ಅಲರ್ಟ್‌, ಹೇಗಿರುತ್ತೆ ಇವತ್ತು ಮಳೆ? ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯಲ್ಲಿ ಪುಷ್ಯ ಮಳೆ ಅಬ್ಬರ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರವು ಜೋರು ಮಳೆಯಾಗಿದೆ. ಇನ್ನೊಂದೆಡೆ ಇವತ್ತು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ಜಿಲ್ಲೆಗೆ ಆರೆಂಜ್‌ ಅಲರ್ಟ್‌ (Alert) ಘೋಷಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿ ಇದ್ದ ಆಂಬುಲೆನ್ಸ್‌ಗೆ ಜೀರೋ ಟ್ರಾಫಿಕ್‌, ವಿಮಾನ ನಿಲ್ದಾಣದಿಂದ ಮುಂಬೈಗೆ ಶಿಫ್ಟ್‌

ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಾತ್ರ ಆರೆಂಜ್‌ ಅಲರ್ಟ್‌ ಇರಲಿದೆ. ಈ ಜಿಲ್ಲೆಯಲ್ಲಿ ಮೇಲ್ಮೈ ಗಾಳಿಯು ರಭಸವಾಗಿ ಬೀಸಲಿದೆ ಎಂದು ಅಲರ್ಟ್‌ನಲ್ಲಿ ತಿಳಿಸಲಾಗಿದೆ.

ಮೈ ಕೊರೆಯುವ ಚಳಿ

ಕಳೆದ ಮೂರ್ನಾಲ್ಕು ದಿನದಿಂದ ಭಾರಿ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಸಂಪೂರ್ಣ ತಗ್ಗಿದೆ. ತೀವ್ರ ಚಳಿ ವಾತಾವರಣ ಇದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಲಿದೆ.

June-2025-Report-Shivamogga-Live-New-New.

ಇನ್ನು, ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌, ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಅಂದಾಜಿಸಲಾಗಿದೆ.

Orange Alert In Shivamogga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment