ಶಿವಮೊಗ್ಗ ಜಿಲ್ಲೆಗೆ ಎರಡು ದಿನ ಆರೆಂಜ್‌ ಅಲರ್ಟ್‌, ಇನ್ನೆರಡು ದಿನ ಯಲ್ಲೋ ಅಲರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 4 JULY 2023

SHIMOGA : ರಾಜ್ಯಾದ್ಯಂತ ಮುಂಗಾರು ಚುರುಕಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್‌ (Alert) ಘೋಷಿಸಿದೆ.

290623 Rain General Image

ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌

ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ (Alert) ಘೋಷಿಸಿದೆ. ಜು.5 ಮತ್ತು 6ರಂದು ಈ ಅಲರ್ಟ್‌ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ 115 ಮಿ.ಮೀ.ನಿಂದ 204 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಜು.7 ಮತ್ತು 8ರಂದು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಯಲ್ಲೂ ಅಲರ್ಟ್‌ ವೇಳೆ 64 ಮಿ.ಮೀ.ನಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಂಭವವಿದೆ. ಗುಡುಗು, ಮಿಂಚ, ಜೋರು ಗಾಳಿ ಸಹಿತ ಮಳೆಯಲಾಗಿದೆ ಎಂದು ಎಚ್ಚರಿಕೆ ನೀಡಲಾಗಿದೆ.

SMG-LIVE-JUNE-VIEWS

ಬೆಳಗ್ಗೆಯಿಂದಲೆ ಮಳೆ ಆರಂಭ

ಜಿಲ್ಲೆಯ ವಿವಿಧೆಡೆ ಬೆಳೆಗ್ಗೆಯಿಂದ ಮಳೆ ಆರಂಭವಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಶಿಕಾರಿಪುರ ತಾಲೂಕಿನ ಹಲವು ಕಡೆ ಮಳೆಯಾಗುತ್ತಿರುವ ವರದಿಯಾಗಿದೆ. ತೀರ್ಥಹಳ್ಳಿ ತಾಲೂಕು ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 0.5 ಮಿ.ಮೀ, ಸಾಗರದ ಕಾಂಡಿಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 0.5 ಮಿ.ಮೀ, ಶಿಕಾರಿಪುರದ ತಡಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 0.5 ಮಿ.ಮೀ ಮಳೆಯಾಗಿದೆ. ಇನ್ನು, ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಬಿರುಸು ಪಡೆದಿದೆ.

ಇದನ್ನೂ ಓದಿ –  ಮುಂಗಾರು ಚುರುಕು, ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಲ್ಲಿ ಎಷ್ಟು ನೀರಿದೆ?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment