ಶಿವಮೊಗ್ಗ ಜಿಲ್ಲಾಡಳಿತಕ್ಕೆ ತಲೆನೋವು ತಂದ ಪೇಷಂಟ್ ನಂಬರ್ 1304, ಪೊಲೀಸರು, ಅಧಿಕಾರಿಗಳೇ ಕ್ವಾರಂಟೈನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಮೇ 2020

ಕರೋನ ಸೋಂಕಿತ ಪೇಷಂಟ್‍ ನಂಬರ್ 1304 ಶಿವಮೊಗ್ಗ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವು ತಂದಿದೆ. ಸೋಂಕಿತೆಗೆ ಆಪ್ತ ಸಮಾಲೋಚನೆ ನಡೆಸಿದ್ದ ಅಧಿಕಾರಿಗಳೆಲ್ಲ ಈಗ ಕ್ವಾರಂಟೈನ್‍ಗೆ ಒಳಗಾಗುವಂತಾಗಿದೆ.

15 ವರ್ಷದ ಬಾಲಕಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಆರೋಗ್ಯ ತಪಾಸಣೆ ನಡೆಸಲಾಗುತ್ತಿತ್ತು. ಪ್ರಕರಣವೊಂದರ ಸಂಬಂಧ ಈ ಬಾಲಕಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಈ ಬಾಲಕಿಗೆ ಆಪ್ತ ಸಮಾಲೋಚನೆಯನ್ನು ನಡೆಸಿದ್ದರು ಎಂದು ತಿಳಿದು ಬಂದಿದೆ.

ಸೋಂಕು ತಂದ ಫಜೀತಿ

ಬಾಲಕಿಯನ್ನು ಕರೋನ ತಪಾಸಣೆಗೆ ಒಳಪಡಿಸಿದಾಗ ಆಕೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದರೆ ಇದಕ್ಕೂ ಮೊದಲು ಬಾಲಕಿಗೆ ಆಪ್ತ ಸಮಾಲೋಚನೆ ನಡೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿಯನ್ನು ಗುರುತಿಸಿ, ಈಗ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.

ಟ್ರಾವಲ್ ಹಿಸ್ಟರಿಯೆ ಇಲ್ಲ..!

ಪಿ1304ಗೆ ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲ. ಈಗೆ ಶಿವಮೊಗ್ಗ ಜಿಲ್ಲೆಯಿಂದ ಹೊರಗೆ ಹೋಗಿರುವ ಮಾಹಿತಿ ಇಲ್ಲ. ಹಾಗಿದ್ದು ಕರೋನ ಪಾಸಿಟಿವ್ ಬಂದಿರುವುದು ಈಗ ಆತಂಕ ಹುಟ್ಟಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 19, 2020

Leave a Comment