ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 14 NOVEMBER 2024 : ಕನಿಷ್ಠ ಬೆಂಬಲ ಬೆಲೆಗೆ 2.24 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು (Paddy) ರಾಜ್ಯದ ರೈತರಿಂದ ಖರೀದಿಸಲು ಕೇಂದ್ರ ಸರ್ಕಾರ ಆದೇಶಿಸಿದೆ. ಸಾಮಾನ್ಯ ಭತ್ತಕ್ಕೆ 2300 ರೂ., ಎ ಗ್ರೇಡ್ ಭತ್ತಕ್ಕೆ 2320 ರೂ. ದರ ನಿಗದಿ ಮಾಡಿದೆ.
ನ.15ರಿಂದ ನೋಂದಣಿ ಅರಂಭವಾಗಲಿದೆ. ರೈತರು ಕೃಷಿ ಇಲಾಖೆಯ ಫ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ರೈತರಿಂದ ಕನಿಷ್ಟ ಬೆಂಬಲ ಬೆಲೆಗೆ ಭತ್ತ ಖರೀದಿಸಲು ರಾಜ್ಯ ಸಹಕಾರ ಮಾರಾಟ ಮಹಾಮಂಡಳವನ್ನು ಸಂಗ್ರಹಣಾ ಏಜೆಸ್ಸಿಯಾಗಿ ನೇಮಿಸಲಾಗಿದೆ.
ಎಷ್ಟು ಭತ್ತ ಖರೀದಿ ಮಾಡಲಾಗುತ್ತದೆ?
ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 40 ಕ್ವಿಂಟಾಲ್ ಭತ್ತ ಖರೀದಿಸಲಾಗುತ್ತದೆ. ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಎಪಿಎಂಸಿ ಆವರಣದಲ್ಲಿ ಖರೀದಿ ಕೇಂದ್ರ ತೆರೆದು ಭತ್ತ ಖರೀದಿಸಲಾಗುತ್ತದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡರೆ ಅಗತ್ಯವಿದ್ದ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. 2025ರ ಜನವರಿ 1 ರಿಂದ ಮಾರ್ಚ್ 31ರವರೆಗೆ ಖರೀದಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಸಿಗಂದೂರು ಬಳಿ ಹಿನ್ನೀರಿನಲ್ಲಿ ಮೂವರು ಯುವಕರ ಮೃತದೇಹ ಪತ್ತೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422