ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಡಿಸೆಂಬರ್ 2021
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಇವತ್ತು ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದ ಮತದಾನ ಬಿರುಸು ಪಡೆದುಕೊಂಡಿದೆ.
ಶಿವಮೊಗ್ಗದ ಪುರದಾಳು, ಕುಂಸಿ, ಶಿಕಾರಿಪುರದ ಹಾರೋಗೊಪ್ಪ ಗ್ರಾಮ ಪಂಚಾಯಿತಿಗಳಲ್ಲಿ ಮತದಾನ ನಡೆಯುತ್ತಿದೆ. ಮತಗಟ್ಟೆ ಸುತ್ತಲು ನೂರು ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸರನ್ನು ನಿಯೋಜಿಸಲಾಗಿದೆ.
ಮೂರು ಪಂಚಾಯಿತಿ 39 ಸ್ಥಾನ
ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 39 ಸ್ಥಾನಗಳಿಗೆ ಇವತ್ತು ಚುನಾವಣೆ ನಡೆಯುತ್ತಿದೆ. ಕುಂಸಿ ಗ್ರಾಮ ಪಂಚಾಯಿತಿಯ 16, ಪುರದಾಳು 9, ಹಾರೋಗೊಪ್ಪದ 19 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. 3 ಪಂಚಾಯಿತಿ ವ್ಯಾಪ್ತಿಯಲ್ಲಿ 17 ಬೂತ್ ಸ್ಥಾಪಿಸಲಾಗಿದೆ. 12,813 ಮತದಾರರಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಕಡೆ ಕ್ಷಣದ ಪ್ರಚಾರ
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪ್ರತಿ ಮತವು ಪ್ರಮುಖವಾಗಿರುತ್ತದೆ. ಹಾಗಾಗಿ ಅಭ್ಯರ್ಥಿಗಳು, ಅವರ ಬೆಂಬಲಿಗರು ಕಡೆ ಕ್ಷಣದ ಪ್ರಚಾರದಲ್ಲಿ ನಿರತವಾಗಿದ್ದಾರೆ. ಮತಗಟ್ಟೆ ಬಳಿಗೆ ಬರುವ ಮತದಾರರಿಗೆ ತಮ್ಮ ಪರವಾಗಿ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.
ಮತಗಟ್ಟೆ ಇರುವ ಶಾಲೆಗಳಿಗೆ ರಜೆ
ಗ್ರಾಮ ಪಂಚಾಯಿತಿ ಚುನಾವಣೆಗೆ ಶಾಲೆ, ಕಾಲೇಜಿನಲ್ಲಿಮತಗಟ್ಟೆ ಸ್ಥಾಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿರುವ ಶಾಲೆ, ಕಾಲೇಜಿಗೆ ಇವತ್ತು ರಜೆ ಘೋಷಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ, ಡಿ.27ರಂದು ಕೆಲವು ಶಾಲೆ, ಕಾಲೇಜುಗಳಿಗೆ ರಜೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422