ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ

ಶಿವಮೊಗ್ಗ ಲೈವ್.ಕಾಂ | SHIMOGA | 5 ಮೇ 2020
ಹೊರ ಜಿಲ್ಲೆಗಳಿಗೆ ಒಂದು ಅವಧಿಗೆ ಮಾತ್ರ ತೆರಳುವವರಿಗೆ ಈಗಾಗಲೇ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಂತದಲ್ಲಿ ವನ್ ವೇ ಪಾಸ್ ನೀಡಲಾಗುತ್ತಿದೆ. ವಿಳಂಬಕ್ಕೆ ಅವಕಾಶವಿಲ್ಲದಂತೆ ಅರ್ಜಿ ಸಲ್ಲಿಸಿದ ಎರಡು ಗಂಟೆ ಒಳಗಾಗಿ ಪಾಸ್ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.
ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಂದರ್ಭದಲ್ಲಿ ಈ ಕುರಿತು ಜಿಲ್ಲಾಧಿಕಾರಿ ಶಿವಕುಮಾರ್ ಸೂಚನೆಗಳನ್ನು ನೀಡಿದರು.

ಅರ್ಜಿಯಲ್ಲಿ ಮೊಬೈಲ್ ಸಂಖ್ಯೆ ಸೇರಿದಂತೆ ಕನಿಷ್ಟ ಮಾಹಿತಿಗಳನ್ನು ಮಾತ್ರ ಪಡೆಯಬೇಕು. ಜನರನ್ನು ಕಾಯಿಸದೆ ನೇರವಾಗಿ ಅರ್ಜಿಯನ್ನು ಸ್ವೀಕರಿಸಬೇಕು. ಒಂದು ವೇಳೆ ಪಾಸ್ ನೀಡಲು ಸಾಧ್ಯವಿಲ್ಲದಿದ್ದರೆ ಅರ್ಜಿ ಸ್ವೀಕರಿಸುವ ಸಂದರ್ಭದಲ್ಲಿಯೇ ತಿಳಿಸಬೇಕು. ಅರ್ಜಿಗಳನ್ನು ತಹಶೀಲ್ದಾರ್ ಕಚೇರಿಯಲ್ಲಿ ಸ್ವೀಕರಿಸಬೇಕು. ಪಾಸ್ಗಳನ್ನು ಮೊಬೈಲ್ ಸಂಖ್ಯೆ ತಿಳಿಸಿ ನಾಡ ಕಚೇರಿಯಲ್ಲಿ ಪಡೆಯಬೇಕು ಎಂದು ಹೇಳಿದರು.

ಒಂದು ಊರಿಗೆ ಒಂದು KSRTC ಬಸ್
ಹೊರ ಜಿಲ್ಲೆಗಳಿಗೆ ತೆರಳುವವರು ಬಸ್ ಸೌಲಭ್ಯ ಬಯಸಿದರೆ ಕಲ್ಪಿಸಬೇಕು. ಯಾವುದಾದರೂ ಒಂದು ಊರಿಗೆ ಒಂದು ಬಸ್ನಲ್ಲಿ ಪ್ರಯಾಣಿಸುವಷ್ಟು ಜನರಿಂದ ವಿನಂತಿ ಬಂದರೆ, KSRTC ಅಧಿಕಾರಿಗಳಿಗೆ ಮಾತನಾಡಿ ಬಸ್ ವ್ಯವಸ್ಥೆ ಮಾಡಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಮತ್ತಿತರರು ಉಪಸ್ಥಿತರಿದ್ದರು.
ಇನ್ನು, ಪಾಸ್ ಪಡೆಯಲು ಇವತ್ತು ಕೂಡ ಶಿವಮೊಗ್ಗ ತಹಶೀಲ್ದಾರ್ ಕಚೇರಿ ಮುಂದೆ ಜನ ಸಾಗರವೆ ಸೇರಿತ್ತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com






