ದೇವರ ಮೂರ್ತಿ ಕಿತ್ತೆಸೆದಿದ್ದ ಇಬ್ಬರು ಆರೋಪಿಗಳು ಅರೆಸ್ಟ್‌

ಶಿವಮೊಗ್ಗ: ಬಂಗಾರಪ್ಪ ಬಡಾವಣೆಯಲ್ಲಿ ಗಣಪತಿ ಮತ್ತು ನಾಗರ ಕಲ್ಲಿಗೆ ಅಪಮಾನ ಮಾಡಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ (Arrest). ಇವರ ವಿರುದ್ಧ ಜಾತಿ ನಿಂದನೆ ಪ್ರಕರಣವು ದಾಖಲಾಗಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಶೇಷಾದ್ರಿಪುರಂ ನಿವಾಸಿ ಸೈಯದ್‌ ಅಹಮದ್‌ (32) ಮತ್ತು ಬಾಪೂಜಿ ನಗರ ನಿವಾಸಿ ರೆಹಮತುಲ್ಲಾ (50) ಬಂಧಿತರು.

ಮನೆ ಮುಂಭಾಗದ ಉದ್ಯಾನದ ದೇವಸ್ಥಾನದಲ್ಲಿ ದೇವರ ವಿಗ್ರಹಗಳಿದ್ದವು. ಅದರಲ್ಲಿ ನಾಗರ ಕಲ್ಲನ್ನು ಚರಂಡಿಗೆ ಎಸೆಯಲಾಗಿತ್ತು. ಇದನ್ನು ಪ್ರಶ್ನಿಸಿದಾಗ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nanjappa Hospital Advertisement

ಇದನ್ನೂ ಓದಿ » ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಮಿನಿ ಬಸ್‌ ಪಲ್ಟಿ

June-2025-Report-Shivamogga-Live

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment