ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಮೇ 2020
ಶಿವಮೊಗ್ಗ ಜಿಲ್ಲೆಯಲ್ಲಿ ಹತ್ತು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಇದರು ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹತ್ತು ಪಾಸಿಟಿವ್ ಪ್ರಕರಣಗಳಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಆದರೆ ಅಧಿಕಾರಿಗಳು ಮಾತ್ರ ಇದನ್ನು ಅಧಿಕೃತಗೊಳಿಸುತ್ತಿಲ್ಲ.
ಬೇರೆ ರಾಜ್ಯದಿಂದ ಬಂದವರದ್ದೇ ಕೊಡುಗೆ
ಅನ್ಯ ರಾಜ್ಯದಿಂದ ಶಿವಮೊಗ್ಗಕ್ಕೆ ಬಂದವರಿಂದಲೇ ಆತಂಕ ಸೃಷ್ಟಿಯಾಗಿದೆ. ಈಗಿನ ಪ್ರಕರಣಗಳಲ್ಲೂ ಮುಂಬೈ, ಆಂಧ್ರ ಮತ್ತು ಕೇರಳದಿಂದ ಬಂದವರಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತಿದೆ. ಆದರೆ ಈ ಕುರಿತು ಅಧಿಕಾರಿಗಳು ಇನ್ನು ಸ್ಪಷ್ಟನೆ ನೀಡಿಲ್ಲ.
ಸೋಂಕಿತರು ತೀರ್ಥಹಳ್ಳಿ, ಶಿವಮೊಗ್ಗ, ಶಿಕಾರಿಪುರಕ್ಕೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ಬೆಳಗ್ಗೆ ಬಿಡುಗಡೆಯಾಗಲಿರುವ ಸ್ಟೇಟ್ ಬುಲೆಟಿನ್‍ನಲ್ಲಿ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]