| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಸವಿತಾ ಸಮಾಜವನ್ನು ಅವ್ಯಾಚ ಶಬ್ಧ ಬಳಸಿ ನಿಂದಿಸಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಂದು ಆರೋಪಿಸಿರುವ ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿತು.
ಸಿ.ಟಿ.ರವಿ ಅವರು ಶಾಸಕ, ಮಂತ್ರಿ ಆಗಿದ್ದ ಸಂದರ್ಭ ಅವರು ತೋರಿದ್ದ ದುರಹಂಕಾರದ ವರ್ತನೆಯ ಕಾರಣಕ್ಕೆ ಚಿಕ್ಕಮಗಳೂರು ಕ್ಷೇತ್ರದ ಜನ ಹೀನಾಯವಾಗಿ ಸೋಲಿಸಿದ್ದರು. ಈ ಮೂಲಕ ಅವರ ತಲೆಗೆ ಏರಿದ್ದ ಅಧಿಕಾರದ ಅಮಲನ್ನು ಇಳಿಸಿದ್ದಾರೆ. ಆದರೂ ಬುದ್ಧಿ ಕಲಿಯದ ಅವರು ಇನ್ನೂ ಅಂತಹ ಸಮುದಾಯ ವಿರೋಧಿ ಹೇಳಿಕೆ ನೀಡುವುದನ್ನು ನಿಲ್ಲಿಸಿಲ್ಲ ಎಂದು ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ದೂರಿದರು.
ಹಿಂದುಳಿದ ವರ್ಗಗಳಿಗೆ ಸೇರಿದ ಸವಿತಾ ಸಮಾಜದ ವಿರುದ್ಧ ಸಂವಿಧಾನ ಮತ್ತು ಕಾನೂನಿನ ಮೂಲ ಆಶಯಗಳಿಗೆ ವಿರುದ್ಧವಾಗಿ ಮಾತನಾಡಿರುವ ಸಿ.ಟಿ.ರವಿ ಆ ಸಮಾಜವನ್ನು ಅತ್ಯಂತ ತುಚ್ಚವಾಗಿ ಕಂಡಿದ್ದಾರೆ. ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ವಿಧಾನ ಪರಿಷತ್ ಸದಸ್ಯತ್ವದಿಂದ ಅವರನ್ನು ವಜಾ ಮಾಡಬೇಕು ಹಾಗೂ ಪೊಲೀಸ್ ಇಲಾಖೆ ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
![]()
ಕಾಂಗ್ರೆಸ್ ಮುಖಂಡರಾದ ಶರತ್ ಮರಿಯಪ್ಪ, ನಾಗರಾಜ ಕಂಕಾರಿ, ಹೆಚ್.ಫಾಲಾಕ್ಷಿ, ಜಿ.ಡಿ. ಮಂಜುನಾಥ್, ಚೈತ್ರಾ ಮೋಹನ್, ಎಸ್.ಕೆ. ಭಾಸ್ಕರ್, ಪಿ. ಮೋಹನ್, ಆರ್. ರಾಘವೇಂದ್ರ, ಬಸವರಾಜ, ಗಂಗಾಧರ್, ಟಿ.ಡಿ. ಶಶಿಕುಮಾರ್, ರವಿಕುಮಾರ್, ಮುರುಗೇಶ್, ಚಂದ್ರಶೇಖರ್, ಮಂಜು ನಾಥ್, ಗಂಗಾಧರ್, ಜಯಶೀಲ, ಎಂ.ಸಿದ್ದರಾಮು ಇದ್ದರು.
ಇದನ್ನೂ ಓದಿ » ಶಿವಮೊಗ್ಗಕ್ಕೆ ಡಿಜಿ ಐಜಿಪಿ ಭೇಟಿ, ಮಹತ್ವದ ಮೀಟಿಂಗ್, ಪೊಲೀಸರಿಗೆ ಖಡಕ್ ಸೂಚನೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()