ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 OCTOBER 2023
SHIMOGA : ಲೋಕಾಯುಕ್ತ ಪೊಲೀಸ್ (Lokayukta) ವಿಭಾಗದ ವತಿಯಿಂದ ಜಿಲ್ಲೆಯಾದ್ಯಂತ ಕುಂದು ಕೊರತೆ ಅರ್ಜಿ ಸ್ವೀಕಾರ ನಿಗದಿಪಡಿಸಲಾಗಿದೆ. ಫಲಾನುಭವಿಗಳಿಗೆ ಸರ್ಕಾರಿ ಯೋಜನೆ ದೊರಕಿಸಿಕೊಡುವಲ್ಲಿ ಬೇಜವಾಬ್ದಾರಿ, ಕರ್ತವ್ಯ ನಿರ್ವಹಿಸಲು ಅಧಿಕಾರಿಗಳ ನಿರ್ಲಕ್ಷ್ಯ, ವಿಳಂಬ, ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಹವಾಲು ಸಲ್ಲಿಸಬಹುದಾಗಿದೆ.
ಎಲ್ಲೆಲ್ಲಿ ನಡೆಯುತ್ತೆ ಸಭೆ?
ಅ.19ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವೆರೆಗೆ. ಅ.20ರಂದು ಸೊರಬ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ, ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ವರೆಗೆ. ಅ.21ರಂದು ಸಾಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅಹವಾಲು ಸ್ವೀಕರಿಸಲಾಗುತ್ತದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಕೆಲಸ ಶುರು, ಇಲ್ಲಿದೆ ಕಾಮಗಾರಿ ಕುರಿತ 4 ಪ್ರಮುಖಾಂಶ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422