ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜೂನ್ 2020
ಜಿಲ್ಲೆಯಾದ್ಯಂತ 33 ಕೇಂದ್ರಗಳಲ್ಲಿ ಜೂನ್ 18ರಂದು ಪಿಯುಸಿ ಪರೀಕ್ಷೆ ನಡೆಯಲಿದೆ. ಆ ದಿನ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.
ಜೂ.18ರಂದು ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತಲು ಬೆಳಗ್ಗೆ 7.30 ರಿಂದ ಸಂಜೆ 4 ಗಂಟೆವರೆಗೆ ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿ ಹೊರತು ಇತರರು ಯಾರಿಗೂ ಈ ಪ್ರದೇಶದಲ್ಲಿ ಪ್ರವೇಶ ಇರುವುದಿಲ್ಲ. ನಿಷೇಧಿತ ಪ್ರದೇಶದಲ್ಲಿ 5 ಅಥವಾ ಅದಕ್ಕಿಂತಲೂ ಹೆಚ್ಚಿನ ಜನರು ಗುಂಪುಗೂಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಇನ್ನು, ಪರೀಕ್ಷಾ ಕೇಂದ್ರದ ಸುತ್ತಲು ಇರುವ ಜೆರಾಕ್ಸ್ ಅಂಗಡಿ, ಟೈಪಿಂಗ್ ಮತ್ತು ಫ್ಯಾಕ್ಸ್ ಸೆಂಟರ್‍ಗಳನ್ನು ಪರೀಕ್ಷೆ ದಿನ ಬಂದ್ ಮಾಡಬೇಕು. ನಿಷೇಧಿತ ಪ್ರದೇಶದಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






