ಶಿವಮೊಗ್ಗ LIVE
ಶಿವಮೊಗ್ಗ: ಜಿಲ್ಲಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ (Pulse Polio) ಲಸಿಕಾ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಲು ಸರ್ವರೂ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ 5 ವರ್ಷದೊಳಗಿನ 1,45,255 ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ. ಅತಿ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾದ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಬಟ್ಟಿಗಳು, ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಜಿಲ್ಲಾದ್ಯಂತ 1,016 ಲಸಿಕಾ ಬೂತ್ ಗಳನ್ನ ಗುರುತಿಸಲಾಗಿದೆ ಎಂದು ತಿಳಿಸಿದರು.
ಇದರಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವ್ಯಾಕ್ಸಿನೇಟರ್‌ಗಳಾಗಿ ಕಾರ್ಯನಿರ್ವಹಿಸುತ್ತಾರೆ ಎಂದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
ಪಲ್ಸ್ ಪೋಲಿಯೊ ಲಸಿಕೆ ನೀಡಲು ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳು, ಅಂಗನವಾಡಿಗಳು ಮತ್ತು ಶಾಲೆಗಳಲ್ಲಿ ಲಸಿಕಾ ಬೂತ್‌ಗಳನ್ನು ತೆರೆಯಲಾಗಿದೆ. ಪ್ರತಿಯೊಂದು ತಾಲೂಕುಗಳಿಗೆ ನೋಡಲ್ ಅಧಿಕಾರಿಗಳು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿ.21ರಂದು ಭಾನುವಾರ ಪುನಃ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





