ಪಲ್ಸ್‌ ಪೋಲಿಯೋ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ? ಎಷ್ಟು ಕೇಂದ್ರ ಸ್ಥಾಪಿಸಲಾಗಿದೆ?

SHIVAMOGGA LIVE NEWS | 3 MARCH 2024 ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

SHIMOGA : ಜಿಲ್ಲೆಯಾದ್ಯಂತ ಮಾ.3ರಂದು ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಪುನಃ ಹಾಕಿಸಬೇಕು. ಜಿಲ್ಲೆಯಲ್ಲಿ ಭಾನುವಾರ 1,20,626 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜೊತೆಗೆ ಅತೀ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲ್ಪಟ್ಟ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಭಟ್ಟಿಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜಿಲ್ಲೆಯಾದ್ಯಂತ 1037 ಬೂತ್‍ಗಳಲ್ಲಿ ಲಸಿಕೆ ಹಾಕಲಾಗುವುದು. ಶಾಲೆಗಳಲ್ಲಿ ಲಸಿಕಾ ಬೂತ್‍ಗಳನ್ನು ತೆರೆಯಲಾಗಿದೆ. ಪ್ರತಿ ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿ ಮತ್ತು ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ –ಆಲ್ಕೊಳ ಸರ್ಕಲ್‌ ಬಳಿ ವಿವಿಧ ಅಂಗಡಿಗಳ ಮೇಲೆ ದಾಳಿ, 11 ಕೇಸ್‌ ದಾಖಲು, ಕಾರಣವೇನು?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಹೆಂಡತಿಗೆ ಕಿರುಕುಳ, ಗಂಡನಿಗೆ ಜೈಲು ಶಿಕ್ಷೆ, ದಂಡ