ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕೇಂದ್ರ ಭೂ ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳ ಮಂಜೂರಾತಿಗಾಗಿ ಮನವಿ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೈನಿಕ ಶಾಲೆ, DRDO ಲ್ಯಾಬ್
ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗಕ್ಕೆ ಸೈನಕ ಶಾಲೆ ಮತ್ತು DRDO ರೀಸರ್ಚ್ ಲ್ಯಾಬ್ ಮಂಜೂರಾತಿ ಕುರಿತು ಚರ್ಚೆ ನಡೆಸಿದರು.
ನವೋದಯ, ಕೇಂದ್ರಿಯ ವಿದ್ಯಾಲಯ
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ, ಶಿವಮೊಗ್ಗದಲ್ಲಿ ಹೆಚ್ಚುವರಿಯಾಗಿ ಜವಾಹರ್ ನವೋದಯ ವಿದ್ಯಾಲಯ ಮತ್ತು ಕೇಂದ್ರಿಯ ವಿದ್ಯಾಲಯಗಳನ್ನು ಸ್ಥಾಪನೆಗೆ ಮನವಿ ಮಾಡಿದರು. ಅಲ್ಲದೆ ಕುವೆಂಪು ವಿಶ್ವವಿದ್ಯಾಲಯದ ಅಭಿವೃದ್ಧಿ ಕಾರ್ಯಗಳಗೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಮನವಿ ಮಾಡಿದರು.
ರಸ್ತೆ ಅಗಲೀಕರಣ, ರಿಂಗ್ ರಸ್ತೆ
ಕೇಂದ್ರ ಭೂ ಸಾರಿಗೆ ಇಲಾಖೆ ಡೈರೆಕ್ಟರ್ ಜನರಲ್ ಐ.ಕೆ.ಪಾಂಡೆ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ರವಿ ಪ್ರಸಾದ್ ಅವರು ಸಂಸದ ರಾಘವೇಂದ್ರ ಭೇಟಿಯಾದರು. ಶಿವಮೊಗ್ಗ ನಗರದ ಉತ್ತರ ಭಾಗದ ಹೊರ ವರ್ತುಲ ರಸ್ತೆಯ ಅಲೈನ್ಮೆಂಟ್ ನಕ್ಷೆ ಅನುಮೋದನೆ ಮಾಡಿಸಿ ಕಾಮಗಾರಿಯಯನ್ನು ಮಂಜೂರು ಮಾಡಿಕೊಡಬೇಕು. ಸಂದೇಶ್ ಮೋಟರ್ಸ್’ನಿಂದ ಅರೆಕೆರೆ ಬೈಪಾಸ್ ರಸ್ತೆವರೆಗೆ 2.5 ಕಿ.ಮೀ ಉದ್ದದ ನಾಲ್ಕು ಪಥದ ರಸ್ತೆ ಅಗಲೀಕರಣ ಕಾಮಗಾರಿಯ ಅಂದಾಜು ಪಟ್ಟಿಗೂ ಮಂಜೂರಾತಿ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200