ಲೋಕಸಭೆಯಲ್ಲಿ ಶರಾವತಿ ಸಂತ್ರಸ್ಥರ ಪರ ಚರ್ಚಿಸಿದ ಸಂಸದ ರಾಘವೇಂದ್ರ, ಏನೇನು ಪ್ರಸ್ತಾಪಿಸಿದರು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 DECEMBER 2022

 ಸುದ್ದಿಯ ಹಿನ್ನೆಲೆ 
ಶರಾವತಿ ಯೋಜನೆ ಸಂತ್ರಸ್ಥರಿಗೆ (sharavathi issue) ಈತನಕ ಭೂಮಿ ಹಕ್ಕು ನೀಡಿಲ್ಲ. ಶರಾವತಿ ಸಂತ್ರಸ್ಥರು ದಶಕಗಳಿಂದ ವಾಸವಾಗಿರವ ಜಮೀನನ್ನು ಡಿನೋಟಿಫೈ ಮಾಡಲಾಗಿದೆ. ಇದು ಸಂತ್ರಸ್ಥರಲ್ಲಿ ಆತಂಕ ಮೂಡಿಸಿದೆ. ನೆಲೆ ಕಳೆದುಕೊಳ್ಳುವ ಭೀತಿಯಲ್ಲಿ ಸಂತ್ರಸ್ಥರು ದಿಕ್ಕು ತೋಚದಂತಾಗಿದ್ದಾರೆ. ಇದೆ ಕಾರಣಕ್ಕೆ ಹೋರಾಟ, ಚಳವಳಿಗಳನ್ನ ನಡೆಸುತ್ತಿದ್ದಾರೆ.

ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ (sharavathi issue) ಜಮೀನಿಗೆ ಹಕ್ಕುಪತ್ರ ನೀಡಲು ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga nanjappa hospital

ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತು ಗಮನ ಸೆಳೆದರು.

ಸಂಸದ ರಾಘವೇಂದ್ರ ಹೇಳಿದ್ದೇನು?

ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಶರಾವತಿ ಜಲವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾದ ಪ್ರದೇಶದಿಂದ ಸ್ಥಳಾಂತರಗೊಂಡ ಕುಟುಂಬಗಳಿಗೆ ಅವಕಾಶ ನೀಡಲಾಗಿತ್ತು. ಆದರೆ 1959ರಿಂದ ಕಂದಾಯ ದಾಖಲೆಗಳಲ್ಲಿ ರೈತರ ಹೆಸರು ನಮೂದಾಗಿಲ್ಲ. ಮಲೆನಾಡು ಪ್ರಾಂತ್ಯವಾದ ಶಿವಮೊಗ್ಗ ಜಿಲ್ಲೆಯ ಈ ಭಾಗದ ಪ್ರಮುಖ ರೈತರು ಈಡಿಗ, ಇತರೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದವರಾಗಿದ್ದು, ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದರು.

SMG LIVE WHATSAPP jpg

 ಯಾವುದೆ ಸವಲತ್ತು ಸಿಗುತ್ತಿಲ್ಲ 
ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯ ಸಂರಕ್ಷಣಾ ಕಾಯಿದೆ-1980 ಕ್ಕಿಂತ ಮೊದಲು, ಅದನ್ನು ಮಾಡಬೇಕಾಗಿತ್ತು ಮತ್ತು ಭೂಮಿಯನ್ನು ಡಿ-ನೋಟಿಫೈ ಮಾಡಬೇಕಾಗಿತ್ತು. ಆದರೆ ಆಗಿನ ಸರ್ಕಾರದ ನಿರ್ಲಕ್ಷದಿಂದ ಅದು ಆಗಲಿಲ್ಲ. ಹಾಗಾಗಿ ಈ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಥವಾ ಸರ್ಕಾರದ ಯಾವುದೇ ಯೋಜನೆಗಳಿಂದ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ ಎಂದರು.

ಇದನ್ನೂ ಓದಿ – ಶರಾವತಿ ಸಂತ್ರಸ್ಥರ ಜಮೀನು ಸರ್ವೆ, ಸಮೀಪಕ್ಕೆ ಬಂತು ಡೆಡ್ ಲೈನ್, ಡಿಸಿ ಹೇಳಿದ್ದೇನು?

ಸಾವಿರಾರು ರೈತರ ಜಮೀನಿಗೆ ಹಕ್ಕುಪತ್ರ ನೀಡಬೇಕೆಂಬ ಬಹುದಿನಗಳ ಬೇಡಿಕೆ ಇಂದಿಗೂ ಈಡೇರಿಲ್ಲ. ಅರಣ್ಯ ಸಂರಕ್ಷಣಾ ಕಾಯ್ದೆ-1980 ಜಾರಿಗೆ ಬಂದ ನಂತರ ಅರಣ್ಯ ಭೂಮಿಯ ಡಿ-ನೋಟಿಫಿಕೇಶನ್ ಅನ್ನು ಕೇಂದ್ರ ಸರ್ಕಾರ ಮಾತ್ರ ಮಾಡಬಹುದಾಗಿದೆ. ಆದ್ದರಿಂದ ಈಗ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದಿಂದ ವಿವರವಾದ ಪ್ರಸ್ತಾವನೆಯನ್ನು ಪಡೆದು ಭೂಮಿಯ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಆ ರೈತರ ಜೀವನೋಪಾಯವನ್ನು ಉಳಿಸಲು ಸೂಕ್ತ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಸದನಕ್ಕೆ ತಿಳಿಸಿದರು.

ಇದನ್ನೂ ಓದಿ – ಶರಾವತಿ ಸಂತ್ರಸ್ಥರ ವಿಚಾರ, ಕಾಂಗ್ರೆಸ್‌ಗೆ 3 ಪ್ರಶ್ನೆ ಕೇಳಿದ ಸಂಸದ ರಾಘವೇಂದ್ರ

 ತಕ್ಷಣ ಡಿ-ನೋಟಿಫೈಗೆ ಕ್ರಮ ಕೈಗೊಳ್ಳಿ 
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಪರಿಸರ ಮತ್ತು ಅರಣ್ಯ ಸಚಿವರು ಶರಾವತಿ ಜಲವಿದ್ಯುತ್ ಯೋಜನೆಯ ಎಲ್ಲಾ ನಿರಾಶ್ರಿತ ಕುಟುಂಬಗಳಿಗೆ ಅರಣ್ಯ ಭೂಮಿ ಮಂಜೂರು ಮಾಡಲು ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಬೇಕು. ವಿಳಂಬ ಮಾಡದೆ ತಕ್ಷಣವೇ ಡಿ-ನೋಟಿಫಿಕೇಶನ್ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸಂಸದ ರಾಘವೇಂದ್ರ ಮನವಿ ಮಾಡಿದ್ದಾರೆ.  
VIDEO

Shimoga Nanjappa hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment