ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021
ಭಾರಿ ಬಿಸಿಲು, ಧಗೆಯಿಂದ ಕಂಗೆಟ್ಟಿದ್ದ ಜಿಲ್ಲೆಯ ಜನರಿಗೆ ಇವತ್ತು ಮಳೆಯಿಂದ ಸ್ವಲ್ಪ ರಿಲೀಫ್ ಸಿಕ್ಕಂತಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗಿದೆ.
ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನ ಕೆಲವು ಕಡೆಯ ಮಳೆಯಾದ ವರದಿಯಾಗಿದೆ. ಹೊಸನಗರ, ರಿಪ್ಪನ್ಪೇಟೆ ಸೇರಿದಂತೆ ಹಲವು ಕಡೆ ಜೋರು ಮಳೆಯಾಗಿದೆ. ದಿಢೀರ್ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು.
ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು. ಆದರೆ ಮಳೆಯಾಗಲಿಲ್ಲ. ತಣ್ಣನೆ ಗಾಳಿ ಬೀಸುತ್ತಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]