ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021
ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆ ರೈತರು ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ತಲೆನೋವು ತಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಮಳೆಯಾಗುತ್ತಿದೆ. ನಡುರಾತ್ರಿವರೆಗೂ ಸುರಿದ ಮಳೆ ಸ್ವಲ್ಪ ಬಿಡುವು ನೀಡುತ್ತು. ಬೆಳಗ್ಗೆಯಿಂದ ಮತ್ತೆ ಜಿಟಿಜಿಟಿ ಮಳೆ ಆರಂಭವಾಗಿದೆ. ವಾಯುವಿಹಾರ, ಜಾಗಿಂಗ್’ಗೆ ತೆರಳುವವರಿಗೆ ತೊಂದರೆಯಾಗಿದೆ. ಇನ್ನು ತರಕಾರಿ ಮಾರುಕಟ್ಟೆ, ಹಾಲು ವ್ಯಾಪಾರಕ್ಕೆ ತೊಡಕಾಗಿದೆ.
ರೈತರ ಗೋಳು ಕೇಳೋದ್ಯಾರು?
ಅಕಾಲಿಕ ಮಳೆ ರೈತರನ್ನು ಚಿಂತೆಗೀಡು ಮಾಡಿದೆ. ಕೊಯ್ಲು ಮಾಡುವ ಹಂತದಲ್ಲಿ ಮಳೆ ಬಂದಿದ್ದರಿಂದ ಭತ್ತದ ಬೆಳೆ ಹಾನಿಯಾಗಿದೆ. ಬೆವರು ಹರಿಸಿ, ಕಷ್ಟಪಟ್ಟು ಬೆಳೆದ ಭತ್ತ ಕಣ್ಮುಂದೆಯೇ ಹಾನಿಯಾಗುತ್ತಿರುವುದನ್ನು ನೋಡಿ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಅಡಕೆ, ಜೋಳ ಸೇರಿದಂತೆ ವಿವಿಧ ಬೆಳೆಗಾರರದ್ದು ಇದೆ ಪರಿಸ್ಥಿತಿಯಾಗಿದೆ.
ನಿರಂತರ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಲ್ಲಿ ಆತಂಕ ಎದುರಾಗಿದೆ. ಮಳೆ ಪ್ರಮಾಣದ ಹೆಚ್ಚಾದರೆ ತಾವು ವಾಸಿಸುತ್ತಿರುವ ಪ್ರದೇಶಗಳ ಜಲಾವೃತವಾಗುವ ಆತಂಕ ಎದುರಾಗಿದೆ.
ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್
ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೊಂದೆಡೆ ಶಿವಮೊಗ್ಗದಲ್ಲಿ ಇವತ್ತು ಭಾರಿ ಮಳೆ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪಕ್ಕದ ಹಾವೇರಿ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರವು ಯಲ್ಲೋ ಅಲರ್ಟ್ ಇರಲಿದೆ.