ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021
ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕೆಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇನ್ನು ಕೆಲವು ಕಡೆ ಮಳೆ, ಬಿಸಿಲಿನ ಕಣ್ಣಾ ಮುಚ್ಚಾಲೆ ಮುಂದುವರೆದಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ.
ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 35.03 ಮಿ.ಮೀ ಮಳೆಯಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 9.60 ಮಿ.ಮೀ, ಭದ್ರಾವತಿಯಲ್ಲಿ 7.20 ಮಿ.ಮೀ, ತೀರ್ಥಹಳ್ಳಿಯಲ್ಲಿ 25. 80 ಮಿ.ಮೀ, ಸಾಗರದಲ್ಲಿ 17.40 ಮಿ.ಮೀ, ಶಿಕಾರಿಪುರದಲ್ಲಿ 7.40 ಮಿ.ಮೀ, ಸೊರಬದಲ್ಲಿ 10 ಮಿ.ಮೀ, ಹೊಸನಗರದಲ್ಲಿ 167.80 ಮಿ.ಮೀ ಮಳೆಯಾಗಿದೆ.
ಸ್ವಲ್ಪ ತಗ್ಗಿದ ಮಳೆ
ಇವತ್ತು ಮಳೆ ಪ್ರಮಾಣ ಸ್ವಲ್ಪ ತಗ್ಗಿದೆ. ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿದ್ದ ಮಳೆ ಕೊಂಚ ಬಿಡುವು ನೀಡಿದೆ. ಹಾಗಾಗಿ ಜನರು ನಿಟ್ಟುಸಿರು ಬಿಡುವಂತಾಗಿದೆ.
ಇನ್ನು, ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆಯಾಟ ಮುಂದುವರೆದಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಸ್ವಲ್ಪ ಹೊತ್ತು ಸುರಿದು ಮಳೆ ನಿಲ್ಲುತ್ತಿದ್ದಂತೆ, ಜೋರು ಬಿಸಿಲು ಆವರಿಸುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುತ್ತಿದ್ದು, ಜನರಲ್ಲಿ ಭಯ ಮೂಡಿಸಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






