ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ, ಈವರೆಗೂ ಏನೆಲ್ಲ ಹಾನಿ ಆಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA| 11 ಜುಲೈ 2022

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (RAIN) ಹಾನಿ (DAMAGE) ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾನದಂಡದ ಅಡಿಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (DEPUTY COMMISSIONER) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

Shimoga Nanjappa Hospital

ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು, ಜಿಲ್ಲೆಯಲ್ಲಿ 129 ಮನೆಗಳು ಭಾಗಶಃ ಹಾನಿಯಾಗಿವೆ. 24 ಮನೆಗಳು (HOUSE) ಸಂಪೂರ್ಣ ಹಾನಿಯಾಗಿವೆ. ಇವುಗಳಿಗೆ ಎನ್.ಡಿ.ಆರ್.ಎಫ್ ಮಾನದಂಡದ ಅಡಿಯಲ್ಲಿ ಪರಿಹಾರ ನೀಡಲಾಗುತ್ತದೆ ಎಂದರು.

ರೈತ, ಜಾನುವಾರುಗಳು ಸಾವು

ಭಾರಿ ಮಳೆಗೆ ಸಾವು, ನೋವಿನ ಕುರಿತು ವರದಿಯಾಗಿದೆ. ರೈತರೊಬ್ಬರು (FARMER) ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೂರು ಜಾನುವಾರುಗಳು ಸಾವನ್ನಪ್ಪಿವೆ. 1 ಜಾನುವಾರು ವಿದ್ಯುತ ಶಾಕ್’ಗೆ ಒಳಗಾಗಿ ಮೃತಪಟ್ಟಿದೆ. ಉಳಿದ ಎರಡು ಜಾನವಾರುಗಳು ನೀರಿನಲ್ಲಿ ಮುಳುಗಿವೆ. ಇದಕ್ಕೂ ಕೂಡ ಪರಿಹಾರ ನೀಡಲಾಗುತ್ತಿದೆ.

ಬೆಳೆ ಹಾನಿ ವರದಿಯಾಗಿಲ್ಲ

ಜಿಲ್ಲೆಯಲ್ಲಿ ಬೆಳೆ ಹಾನಿ ಕುರಿತು ಯಾವುದೆ ವರದಿ ಬಂದಿಲ್ಲ. ಕೆಲವು ಕಡೆ ಜಮೀನು ಜಲಾವೃತವಾದ ವರದಿ ಬಂದಿದೆ. ಆದರೆ ಅದರಿಂದ ಬೆಳೆ ಹಾನಿ ಸಂಭವಿಸುವುದಿಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು, ಅಂಬಾಗುಡ್ಡದಲ್ಲಿ (AMBARAGUDDA) ಗುಡ್ಡ ಕುಸಿತದ ಕುರಿತು ಪರಿಶೀಲನೆ ನಡೆಸುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.

ಇದನ್ನೂ ಓದಿ – ಆಗುಂಬೆಯಲ್ಲಿ ಗುಡ್ಡ ಕುಸಿತ, ಮೂರು ಬದಲಿ ಮಾರ್ಗ, ಯಾವ್ಯಾವುದು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2022

Leave a Comment