ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯಲ್ಲಿ ಇವತ್ತು ಮಳೆ (Rain) ಪ್ರಮಾಣ ತಗ್ಗಿದೆ. ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದ್ದರು ಮಳೆ ಕಡಿಮೆಯಾಗಿದೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಇವತ್ತು ಸಾಧಾರಣ ಮಳೆಯಾಗುತ್ತಿದೆ. ಕೆಲವೆಡೆ ಮಾತ್ರ ಸ್ವಲ್ಪ ಹೊತ್ತು ಜೋರು ಮಳೆಯಾಗಿರುವ ವರದಿಯಾಗಿದೆ. ಇಂದು ಬೆಳಗ್ಗೆ 8.30ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸರಾಸರಿ 21 ಮಿ.ಮೀ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ.
ಎರಡು ದಿನದಿಂದ ಮಳೆ ಕಡಿಮೆ
ಮಂಗಳವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಮಂಗಳವಾರ ಬೆಳಗ್ಗೆ 8.30ರಿಂದ ಬುಧವಾರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 24.7 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 6.9 ಮಿ.ಮೀ, ಹೊಸನಗರ 31.3 ಮಿ.ಮೀ, ಸಾಗರ 28.3 ಮಿ.ಮೀ, ಶಿಕಾರಿಪುರ 7.5 ಮಿ.ಮೀ, ಶಿವಮೊಗ್ಗ 8.9 ಮಿ.ಮೀ, ಸೊರಬ 15.3 ಮಿ.ಮೀ, ತೀರ್ಥಹಳ್ಳಿ 56.9 ಮಿ.ಮೀ ಮಳೆಯಾಗಿದೆ.
ಸರಿದ ಮೋಡ, ಆವರಿಸಿದ ಬಿಸಿಲು
ಇನ್ನು, ಜಿಲ್ಲೆಯಲ್ಲಿ ಬಿಸಿಲು ಆವರಿಸಿದೆ. ಸಣ್ಣ ಪ್ರಮಾಣದ ಮಳೆಯಾಗಿ ಬಳಿಕ ಅಲ್ಲಲ್ಲಿ ಬಿಸಿಲು ಕಾಣಿಸಿಕೊಂಡಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದಲು ಬಿಸಿಲು ಇದೆ. ಸಂಜೆ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ತುಂಗಾ ಡ್ಯಾಮ್‌ನಿಂದ ಮತ್ತಷ್ಟು ನೀರು ಹೊರಕ್ಕೆ, ಇವತ್ತು ಎಷ್ಟಿದೆ ಒಳ, ಹೊರ ಹರಿವು?

LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು






