ಶಿವಮೊಗ್ಗದಲ್ಲಿ ಬಿಸಿಲು, ಮಳೆ ಆಟ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಯ್ತು ವರ್ಷಧಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 6 ಜುಲೈ 2022

ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಮಳೆ (RAIN FALL) ಪ್ರಮಾಣ ಸ್ವಲ್ಪ ತಗ್ಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಭಾರಿ ಮಳೆಗೆ ಸಾಕ್ಷಿಯಾಗಿದ್ದ ಜಿಲ್ಲೆಯಲ್ಲಿ ಇವತ್ತು ಕೆಲವು ಹೊತ್ತು ಬಿಸಿಲು ಪ್ರತ್ಯಕ್ಷವಾಗಿತ್ತು.

Shimoga Nanjappa Hospital

ನಿರಂತರ ಮಳೆ ಹಿನ್ನೆಲೆ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ಈ ತಾಲ್ಲೂಕುಗಳಲ್ಲಿಯು ಮಳೆ ಪ್ರಮಾಣ ತಗ್ಗಿದೆ.

ಶಿವಮೊಗ್ಗ ನಗರದಲ್ಲಿ ಮಳೆ (RAIN FALL) ತುಸು ಬಿಡುವು ನೀಡಿದೆ. ಬೆಳಗ್ಗೆ ಸ್ವಲ್ಪ ಹೊತ್ತು ಮಳೆಯಾಗಿದೆ. ಆ ಬಳಿಕ ಕೆಲವು ಹೊತ್ತು ಬಿಸಿಲು ಕಾಣಿಸಿಕೊಂಡಿತ್ತು. ಪುನಃ ಮೋಡ ಕವಿದ ವಾತಾವರಣವಿದೆ.

24 ಗಂಟೆಯಲ್ಲಿ ಎಷ್ಟು ಮಳೆಯಾಗಿದೆ?

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 280.80 ಮಿಮಿ ಮಳೆಯಾಗಿದೆ. ಸಾಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

24 ಗಂಟೆ ಅವಧಿಯಲ್ಲಿ ಶಿವಮೊಗ್ಗದಲ್ಲಿ 17.60 ಮಿಮಿ., ಭದ್ರಾವತಿಯಲ್ಲಿ 9.90 ಮಿಮಿ., ತೀರ್ಥಹಳ್ಳಿಯಲ್ಲಿ 61.30 ಮಿಮಿ., ಸಾಗರದಲ್ಲಿ 72.30 ಮಿಮಿ., ಶಿಕಾರಿಪುರದಲ್ಲಿ 21.00 ಮಿಮಿ., ಸೊರಬದಲ್ಲಿ 45.00 ಮಿಮಿ. ಹಾಗೂ ಹೊಸನಗರದಲ್ಲಿ 53.70 ಮಿಮಿ. ಮಳೆಯಾಗಿದೆ.

ಇದನ್ನೂ ಓದಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment