
ಶಿವಮೊಗ್ಗ ಲೈವ್.ಕಾಂ | SHIMOGA | 7 ಏಪ್ರಿಲ್ 2020
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗುತ್ತಿದೆ. ಗುಡುಗು ಸಹಿತ ಮಳೆ ಸುರಿಯುತ್ತಿದೆ. ತಾಲೂಕು ಸುತ್ತಮುತ್ತ ಜೋರು ಮಳೆಯಾಗುತ್ತಿರುವ ವರದಿಯಾಗಿದೆ.
ಬೆಳಗ್ಗೆಯಿಂದ ಎಂದಿನಂತೆ ಬಿಸಿಲು ಇತ್ತು. ಮಧ್ಯಾಹ್ನದ ವೇಳೆಗೆ ಮೋಡ ಆವರಿಸಿಕೊಂಡಿದೆ. ಈಗ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ.
ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಜಿಲ್ಲೆಯ ವಿವಿಧೆಡೆ ಸೋಮವಾರ ಮಳೆಯಾಗಿದೆ. ಹರಮಘಟ್ಟದಲ್ಲಿ 6 ಮಿ.ಮೀ, ಅರಳಗೋಡು 2 ಮಿ.ಮೀ, ಕೂಡ್ಲಿ 2 ಮಿ.ಮೀ, ಸಿಂಗನಬಿದರೆ 2, ಸಿದ್ಲಿಪುರ 4, ಸನ್ಯಾಸಿಕೊಡಮಗ್ಗೆ 2 ಮಿ.ಮೀ ಮಳೆಯಾಗಿದೆ ಎಂದು ಕೆಎಸ್ಎನ್’ಎಂಡಿಸಿ ವರದಿಯಲ್ಲಿ ತಿಳಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]