ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಚುರುಕು, ಯಡೂರು, ಆಗುಂಬೆಯಲ್ಲಿ ಹೆಚ್ಚು, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 4 ಜುಲೈ 2022

ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದೆ (RAIN). ಇದರಿಂದ ರೈತರ ಮೊಗದಲ್ಲಿ ಮಂದಹಾಸ ಕಂಡು ಬಂದಿದೆ. ಕೃಷಿ ಚಟುವಟಿಕೆ ಬಿರುಸು ಪಡೆದುಕೊಂಡಿದೆ. ಜಿಲ್ಲೆಯ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದೆ.

Shimoga Nanjappa Hospital

ಆಗುಂಬೆಯಲ್ಲಿ ಮಳೆ ಜೋರು

ದಕ್ಷಿಣ ಭಾರತದ ಚಿರಾಪೂಂಜಿ ಎಂಬ ಖ್ಯಾತಿ ಪಡೆದಿರುವ ಆಗುಂಬೆಯಲ್ಲಿ (AGUMBE) ಜೋರು ಮಳೆಯಾಗುತ್ತಿದೆ (RAIN). ಜುಲೈ 2ರಂದು ಆಗುಂಬೆಯಲ್ಲಿ 124.50 ಮಿ.ಮೀ ಮಳೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ 131 ಮಿ.ಮೀ ಮಳೆಯಾಗಿದೆ. ತೀರ್ಥಹಳ್ಳಿ ತಾಲೂಕು ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 131.50 ಮಿ.ಮೀ ಮಳೆಯಾಗಿದೆ.

ಯಡೂರಿನಲ್ಲಿ ಮಳೆಯೋ ಮಳೆ

ಹೊಸನಗರ ತಾಲೂಕಿನಲ್ಲಿಯು ಭಾರಿ ಮಳೆಯಾಗುತ್ತಿದೆ. ಇಲ್ಲಿನ ಯಡೂರಿನಲ್ಲಿ ಅತಿ ಹೆಚ್ಚು 167 ಮಿ.ಮೀ ಮಳೆಯಾಗಿದೆ. ಇನ್ನು, ಹುಲಿಕಲ್’ನಲ್ಲಿ 134 ಮಿ.ಮೀ, ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 116 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 112 ಮಿ.ಮೀ, ಸುಳಗೋಡಿನಲ್ಲಿ 131 ಮಿ.ಮೀ ಮಳೆಯಾಗಿದೆ. ತಾಲೂಕಿನ ಹೊಸನಗರ, ಆರೋಡಿ, ನಿಟ್ಟೂರು, ಸಂಪೇಕಟ್ಟೆ, ಅಂಡಗದೋದೂರು, ಜಯನಗರ, ರಾಮಚಂದ್ರಾಪುರ, ನಾಗರಕೊಡಿಗೆ ಸೇರಿದಂತೆ ಬಹುತೇಕ ಭಾಗದಲ್ಲಿ ಉತ್ತಮ ಮಳೆಯಾಗಿದೆ.

ಸಾಗರದಲ್ಲೂ ಮಳೆ ಜೋರಿದೆ

ಸಾಗರ ತಾಲೂಕಿನ ವಿವಿಧೆಡೆಯು ಉತ್ತಮ ಮಳೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಸಾಗರ ತಾಲೂಕಿನ ಶಂಕರ ಶಾನುಭಾಗ್’ನಲ್ಲಿ 124.60 ಮಿ.ಮೀ ಮಳೆಯಾಗಿದೆ.

ಉಳಿದಂತೆ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿಯು ಉತ್ತಮ ಮಳೆಯಾಗುತ್ತಿದೆ. ಕಳೆದ ರಾತ್ರಿಯಿಂದ ಮಳೆಯಾಗಿದೆ. ಬೆಳಗ್ಗೆಯಿಂದ ಜೋರಾಗಿದ್ದ ಮಳೆ ಆಗಾಗ ಬಿಡುವು ನೀಡುತ್ತಿದೆ.

ಇದನ್ನೂ ಓದಿ – 12 ವರ್ಷದಿಂದ ತಲೆಮರೆಸಿಕೊಂಡು ಓಡಾಡುತ್ತಿರುವವನು ಸೇರಿ ಇಬ್ಬರ ವಿರುದ್ಧ ಎಫ್ಐಆರ್, ಯಾರದು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 4, 2022

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment