ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ಶಿವರಾತ್ರಿ ಹಬ್ಬದ ಸಂಭ್ರಮದ ನಡುವೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವರುಣನ ಸಿಂಚನವಾಗಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾದ ವರದಿಯಾಗಿದೆ.
ಶಿವಮೊಗ್ಗ ನಗರ ಹೊರತುಪಡಿಸಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆಯಾಗಿದೆ. ಶಿವಮೊಗ್ಗ ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು.
ಸಾಗರದಲ್ಲಿ ಗುಡುಗು ಸಹಿತ ಮಳೆಯಾದ ವರದಿಯಾಗಿದೆ. ಇದರಿಂದ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ತ್ಯಾಗರ್ತಿ ಭಾಗದಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ.
ಹೊಸನಗರ, ರಿಪ್ಪನ್ಪೇಟೆ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಸೊರಬದಲ್ಲಿಯೂ ಜೋರು ಮಳೆ ಸುರಿದಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧೆಡೆಯು ವರುಣ ಅಬ್ಬರಿಸಿದ್ದಾನೆ. ಮಳೆ ಆರಂಭವಾಗುತ್ತಿದ್ದಂತೆ ತಾಲೂಕಿನ ವಿವಿಧೆಡೆ ವಿದ್ಯುತ್ ಕಡಿತವಾಗಿತ್ತು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]