ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021
ಸೋನೆ ಮಳೆಗೆ ಶಿವಮೊಗ್ಗದ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದೆ. ಡ್ಯಾಂಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನಲ್ಲಿ ಜೋರು ಮಳೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಇನ್ನಷ್ಟು ದಿನ ಮಳೆ ಮುಂದುವರೆಯುವ ಸಾದ್ಯತೆ ಇದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 41.31 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 4 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 4.80 ಮಿ.ಮೀ, ತೀರ್ಥಹಳ್ಳಿ 43.20 ಮಿ.ಮೀ, ಸಾಗರದಲ್ಲಿ 30 ಮಿ.ಮೀ ಮಳೆಯಾಗಿದೆ. ಶಿಕಾರಿಪುರದಲ್ಲಿ 7.20 ಮಿ.ಮೀ, ಸೊರಬ 21.40 ಮಿ.ಮೀ, ಹೊಸನಗರದಲ್ಲಿ 178.60 ಮಿ.ಮೀ ಮಳೆಯಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422