ಶಿವಮೊಗ್ಗದ ಮಳೆ ವರದಿ: ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಎಷ್ಟಾಗಿದೆ ವರ್ಷಧಾರೆ? ಇಲ್ಲಿದೆ ಡಿಟೇಲ್ಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಮಳೆ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಳೆದ 24 ಗಂಟೆಯಲ್ಲಿ ಸಾಧಾರಣ ಮಳೆಯಾಗಿದೆ. ಜೂನ್‌ 19ರ ಬೆಳಗ್ಗೆ 8:30 ರಿಂದ ಜೂನ್‌ 20ರ ಬೆಳಗ್ಗೆ 8:30ರವರೆಗೆ ಒಟ್ಟು 6.40 ಮಿ.ಮೀ ಮಳೆ ದಾಖಲಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

ಹೊಸನಗರ ತಾಲೂಕಿನಲ್ಲಿ 3 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ, ಸಾಗರ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ತಲಾ 1 ಮಿ.ಮೀ ಮಳೆಯಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ 0.40 ಮಿ.ಮೀ ಮಳೆ ಬಿದ್ದಿದೆ. ಭದ್ರಾವತಿ ಮತ್ತು ಸೊರಬ ತಾಲೂಕುಗಳಲ್ಲಿ ಮಳೆಯಾಗಿಲ್ಲ.

Man-holds-umbrella-and-rides-cycle-in-rain-at-Vidyanagara-near-NCC-office-in-Shimoga

ಜೂನ್ 1ರಿಂದ ಜೂನ್ 20ರವರೆಗಿನ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 534.00 ಮಿ.ಮೀ ಮಳೆ ಸುರಿದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್‌ ತಿಂಗಳ ವಾಡಿಕೆ ಮಳೆಯ ಪ್ರಮಾಣ 2356.80 ಮಿ.ಮೀ. ಆದರೆ ಈ ಬಾರಿ ಮುಂಗಾರು ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಇದರಿಂದಾಗಿ ಈತನಕ ಜಿಲ್ಲೆಯಲ್ಲಿ 534 ಮಿ.ಮೀ ಮಾತ್ರ ಮಳೆಯಾಗಿದೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ.