ಶಿವಮೊಗ್ಗ: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರಕ್ಕೆ ಹಳ್ಳ, ಕೊಳ್ಳಗಳು ತುಂಬಿವೆ. ಭಾರಿ ಮಳೆಗೆ ಅಲ್ಲಲ್ಲಿ ಆಸ್ತಿಪಾಸ್ತಿಗೆ ಹಾನಿಯು ಉಂಟಾಗಿದೆ. ಇನ್ನು ಇಂದಿನಿಂದ ಮಳೆ (Rainfall) ಪುನರ್ವಸು ಮಳೆ ಶುರುವಾಗಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಶುಕ್ರವಾರ ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಾಯ್ತು ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಫಟಾಫಟ್ ಸುದ್ದಿ.
» ಚಾವಣಿ ಕುಸಿತ, ಮಹಿಳೆಗೆ ಗಾಯ
ರಿಪ್ಪನ್‌ಪೇಟೆ: ಎಡಬಿಡದೆ ಸುರಿದ ಮಳೆಗೆ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಕೊಟ್ಟಿಗೆಯ ಚಾವಣಿ ಕುಸಿದು ಬಿದ್ದು ಮಹಿಳೆ ಗಾಯಗೊಂಡಿದ್ದಾರೆ. ಇಂದಿರಾ ಎಂಬುವವರ ಪಕ್ಕೆಲುಬು ಮುರಿದಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಹಾನಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
» ವರದಾ ನದಿ, ನೆರೆ ಭೀತಿ
ತಾಳಗುಪ್ಪ: ನಿರಂತರ ಮಳೆಗೆ ವರದಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಇದರಿಂದ ತಾಳಗುಪ್ಪ ಹೋಬಳಿಯ ಹಲವು ಗ್ರಾಮಗಳ ಕೃಷಿ ಭೂಮಿಗೆ ನೆರೆಯ ಭೀತಿ ಎದುರಾಗಿದೆ. ಈವರೆಗು ವಾಡಿಕೆಗಿಂತಲು ಅಧಿಕ ಮಳೆಯಾಗಿದೆ.
» ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಬಿರುಸು
ಶಿವಮೊಗ್ಗ: ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಜೂನ್-ಸೆಪ್ಟೆಂಬರ್ ಅವಧಿಯು ಭತ್ತದ ನಾಟಿಗೆ ಸೂಕ್ತ. ಅದ್ದರಿಂದ ಗದ್ದೆಗಳಲ್ಲಿ ನಾಟಿ ಕೆಲಸ ನಡೆಯುತ್ತಿದೆ.
» ತುಂಗಾ ನದಿಗೆ ಬಾಗಿನ ಅರ್ಪಣೆ
ಶಿವಮೊಗ್ಗ: ತುಂಬಿ ಹರಿಯುತ್ತಿರುವ ತುಂಗಾ ನದಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ಬಾಗಿನ ಅರ್ಪಿಸಲಾಯಿತು. ಕೋರ್ಪಲಯ್ಯ ಛತ್ರ ಮಂಟಪದ ಬಳಿ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ಮಾಲತೇಶ್ ಸೇರಿದಂತೆ ಹಲವರು ಇದ್ದರು.
» ಮಹಿಳೆಯರಿಂದ ತುಂಗೆಗೆ ಬಾಗಿನ
ಶಿವಮೊಗ್ಗ: ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಕೋರ್ಪಲ್ಲಯ್ಯನ ಛತ್ರ ಮಂಟಪದ ಬಳಿ ಜೆಸಿಐ ಶಿವಮೊಗ್ಗ ಭಾವನ ಸಂಘಟನೆ ವತಿಯಿಂದ ಬಾಗಿನ ಅರ್ಪಿಸಲಾಯಿತು. ಅಧ್ಯಕ್ಷೆ ರೇಖಾ ರಂಗನಾಥ್, ಕಾರ್ಯದರ್ಶಿ ಚೈತ್ರಾ ಸಜ್ಜನ್, ಸುರೇಖಾ ಮುರಳಿಧರ್, ಪುಷ್ಪ ಶೆಟ್ಟಿ , ಮಾಲರಾಮಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಂಬುಲೆನ್ಸ್ ಪರಿಶೀಲಿಸಿದ ಪೊಲೀಸ್, ಚಾಲಕನಿಗೆ ಕಾದಿತ್ತು ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200