ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ಜುಲೈ 8ರವರೆಗೆ ಅವಕಾಶವಿದೆ. ಒಂದು ವೇಳೆ ಇದೆ ಮೀಸಲಾತಿ ಜಾರಿಯಾದರೆ, ಜಿಲ್ಲಾ ಪಂಚಾಯಿತಿಯ ಅಧ್ಯಕ್ಷೆ, ಉಪಾಧ್ಯಕ್ಷೆ, ಹಿರಿಯ ಮತ್ತು ಪ್ರಭಾವಿ ಸದಸ್ಯರು ಚುನಾವಣೆಗೆ ಸ್ಪರ್ಧಿಸಲು ಅಸಾಧ್ಯವಾಗಬಹುದು ಅಥವಾ ಬೇರೆ ಕ್ಷೇತ್ರಗಳತ್ತ ವಲಸೆ ಹೋಗಬೇಕಾಗುತ್ತದೆ.
ಯಾರಿಗೆಲ್ಲ ಸಮಸ್ಯೆ ಆಗಬಹುದು?
ಜ್ಯೋತಿ ಎಸ್.ಕುಮಾರ್ – ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿರುವ ಜ್ಯೋತಿ ಎಸ್.ಕುಮಾರ್ ಅವರು ಹಿರಿಯೂರು ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಈ ಕ್ಷೇತ್ರ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ.
ವೇದಾ ವಿಜಯ್ ಕುಮಾರ್ – ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ಅವರು ಹಸೂಡಿ ಕ್ಷೇತ್ರದಿಂದ ಗೆದ್ದು ಬಂದಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಹಾಗಾಗಿ ಅವರು ಮರು ಸ್ಪರ್ಧೆಗೆ ಅವಕಾಶವಿದೆ. ಆದರೆ ಅವರ ಪತಿ ವಿಜಯ್ ಕುಮಾರ್ ಸ್ಪರ್ಧಿಸುವ ಕುರಿತು ಚರ್ಚೆಯಾಗುತ್ತಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟ, ಯಾವ್ಯಾವ ಕ್ಷೇತ್ರ ಯಾರಿಗೆ ಮೀಸಲು?
ಕೆ.ಇ.ಕಾಂತೇಶ್ – ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರು ಹೊಳಲೂರು ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಈಗ ಆ ಕ್ಷೇತ್ರ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಹಾಗಾಗಿ ಕಾಂತೇಶ್ ಅವರು ಬೇರೆ ಕ್ಷೇತ್ರ ಹುಡುಕಿಕೊಳ್ಳುವುದು ಅನಿವಾರ್ಯವಾಗಬಹುದು.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಕಲಗೋಡು ರತ್ನಾಕರ್ – ಹಿರಿಯ ಸದಸ್ಯ, ಜಿಲ್ಲಾ ಪಂಚಾಯಿತಿ ಕಾಯ್ದೆಗಳ ಕುರಿತು ಸಂಪೂರ್ಣ ಅರಿವು ಹೊಂದಿರುವ ಕಲಗೋಡು ರತ್ನಾಕರ್ ಅವರು ಹೊಸನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಪುನರ್ ವಿಂಗಡಣೆ ವೇಳೆ ಈ ಕ್ಷೇತ್ರ ವಿಲೀನಗೊಂಡಿದ್ದು, ಅವರು ರಿಪ್ಪನ್‍ಪೇಟೆಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ.
ಕಾಸರವಳ್ಳಿ ಶ್ರೀನಿವಾಸ್ – ಕೃಷಿ, ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಕಾಸರವಳ್ಳಿ ಶ್ರೀನಿವಾಸ್ ಅವರು ಲಿಂಗಾಪುರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಈ ಕ್ಷೇತ್ರ ಬಿಸಿಎಂ ಎ ಮಹಿಳೆಗೆ ಮೀಸಲಾಗಿದೆ.
ಇದನ್ನೂ ಓದಿ | ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳು ಮರು ವಿಂಗಡಣೆ, ನಿಮ್ಮೂರು ಯಾವ ಕ್ಷೇತ್ರ ವ್ಯಾಪ್ತಿಗೆ ಸೇರುತ್ತೆ?
ಮಣಿಶೇಖರ್ – ಭದ್ರಾವತಿಯ ಕೂಡ್ಲಿಗೆರೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಮಣಿಶೇಖರ್ ಅವರಿಗೆ ಈ ಬಾರಿ ಆ ಕ್ಷೇತ್ರದಿಂದ ಸ್ಪರ್ಧಿಸುವುದು ಕಷ್ಟವಾಗಬಹುದು. ತಡಸ (ಕೂಡ್ಲಿಗೆರೆ)ಕ್ಷೇತ್ರ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ಜೆ.ಪಿ.ಯೋಗೇಶ್ – ಹಿರಿಯ ಸದಸ್ಯ ಜೆ.ಪಿ.ಯೋಗೇಶ್ ಭದ್ರಾವತಿಯ ಸಿಂಗನಮನೆ ಕ್ಷೇತ್ರದಿಂದ ಗೆದ್ದು ಬಂದಿದ್ದರು. ಈ ಕ್ಷೇತ್ರ (ದೊಣಬಘಟ್ಟ) ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ಸುರೇಶ್ ಸ್ವಾಮಿರಾವ್ – ನಗರ ಕ್ಷೇತ್ರದಿಂದ ಸುರೇಶ್ ಸ್ವಾಮಿರಾವ್ ಅವರಿಗೆ ಈ ಬಾರಿ ಸ್ಪರ್ಧೆ ಕಷ್ಟವಾಗಬಹುದು. ಮೂಡುಗೊಪ್ಪ ಕ್ಷೇತ್ರ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ.
ಆಕ್ಷೇಪಣೆ ಸಲ್ಲಿಕೆಗೆ ಅವಕಾಶವಿದೆ. ಒಂದು ವೇಳೆ ಆಕ್ಷೇಪಣೆಗಳು ಪೂರಕವಾಗಿದ್ದು, ಮೀಸಲು ಬದಲಾದರೆ ಹಲವು ಸದಸ್ಯರಿಗೆ ಮರು ಸ್ಪರ್ಧೆಗೆ ಅವಕಾಶ ಸಿಗಲಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200