ಭದ್ರಾ ಸೇರಿ ಹಲವು ಜಲಾಶಯಗಳ ನೀರಿನ ಕುರಿತು ಪ್ರಾದೇಶಿಕ ಆಯುಕ್ತರ ಕಟ್ಟುನಿಟ್ಟು ಸೂಚನೆ, ಏನದು?

ಶಿವಮೊಗ್ಗ: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಮೈಸೂರು ವಿಭಾಗದ ವ್ಯಾಪ್ತಿಯ ಪ್ರಮುಖ ಜಲಾಶಯಗಳ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಕಾಯ್ದಿರಿಸಲು ಸರ್ಕಾರ ಆದೇಶಿಸಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಬರುವ ದಿನಗಳಲ್ಲಿ ‘ಎಲ್-ನಿನೋ’ ಪರಿಣಾಮದಿಂದ ಮಳೆ ಅಭಾವ ಹಾಗೂ ಬರ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿಗಳು, ಜಲಾಶಯಗಳನ್ನು ನೆಚ್ಚಿಕೊಂಡು ಯಾವುದೇ ರೈತರು ಬೆಳೆಗಳನ್ನು ಹಾಕಬೇಡಿ ಎಂದು ಸೂಚಿಸಿದ್ದಾರೆ.

Bhadra-Dam-General-Image

ಮೈಸೂರು ವಿಭಾಗದ ವ್ಯಾಪ್ತಿಗೆ ಬರುವ ಕಬಿನಿ, ಹಾರಂಗಿ, ಹೇಮಾವತಿ, ಭದ್ರಾ, ಕೃಷ್ಣರಾಜಸಾಗರ, ನುಗು, ತಾರಕ, ಸುವರ್ಣಾವತಿ, ಚಿಕ್ಕಹೊಳೆ, ಗುಂಡಾಲ್, ಉಡುತೊರೆಹಳ್ಳ, ವಾಟೇಹೊಳೆ ಹಾಗೂ ಯಗಚಿ ಜಲಾಶಯಗಳ ನೀರನ್ನು ಕೇವಲ ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಲಾಗುವುದು. ಪರಿಸ್ಥಿತಿಯ ಗಂಭೀರತೆ ಅರಿತು ರೈತರು ಜಲಾಶಯದ ನೀರನ್ನು ಅವಲಂಬಿಸದೆ, ಕೃಷಿ ಇಲಾಖೆ ಅಧಿಕಾರಿಗಳ ಸಲಹೆಯಂತೆ ಕೇವಲ ಮಳೆ ಆಶ್ರಿತ ಬೆಳೆಗಳನ್ನು ಮಾತ್ರ ಬೆಳೆಯುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕುಡಿಯುವ ನೀರಿನ ಸಮಿತಿ ಅಧ್ಯಕ್ಷರು ಮನವಿ ಮಾಡಿದ್ದಾರೆ.