ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE
ಸಿಗಂದೂರಿನಲ್ಲಿ ಅದ್ಧೂರಿ ಜಾತ್ರೆ
ಸಿಗಂದೂರು : ಶ್ರೀ ಚೌಡೇಶ್ವರಿ ದೇವಿ ಜಾತ್ರೆಯ ಎರಡನೇ ದಿನ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದರು. ಬೆಳಗ್ಗೆಯಿಂದ ಮಹಾಭಿಷೇಕ, ಹೂವಿನ ಮತ್ತು ಆಭರಣ ಅಲಂಕಾರ, ಮಹಾಪೂಜೆ, ದೇವಿ ಪಾರಾಯಣ, ನವ ಚಂಡಿಕಾ ಹೋಮ ನಡೆಸಲಾಯಿತು. ಮಧ್ಯಾಹ್ನದ ವೇಳೆಗೆ ಸಾಂಸ್ಕೃತಿಕ ಕಾರ್ಯಕ್ರಮ, ದುರ್ಗಾ ದೀಪಾರಾಧನೆ, ಕುದ್ರೋಳಿ ಗಣೇಶ್ ಅವರಿಂದ ಮ್ಯಾಜಿಕ್ ಸ್ಟಾರ್ ಮ್ಯಾಜಿಕ್ ಕಾರ್ಯಕ್ರಮ ನಡೆಯಿತು.
ಇದನ್ನು ಓದಿ – ಸಿಗಂದೂರು ಜಾತ್ರೆಗೆ ಅದ್ಧೂರಿ ಚಾಲನೆ, ಹೇಗಿತ್ತು ವೈಭವ? ಯಾರೆಲ್ಲ ಭಾಗವಹಿಸಿದ್ದರು?
ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ದೇಗುಲದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ದೇಗುಲದ ಅನುವಂಶಿಯ ಧರ್ಮದರ್ಶಿ ಡಾ. ರಾಮಪ್ಪ ಮಾತನಾಡಿ, ಸಿಗಂದೂರು ದೇವಿ ಕ್ಷೇತ್ರ ಕೇವಲ ಧಾರ್ಮಿಕ ಕ್ಷೇತ್ರವಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದತ್ತ ಮುಖ ಮಾಡುತ್ತಿದೆ. ಕರೂರು ಹೋಬಳಿಯ ಸರ್ಕಾರ ಶಾಲೆಗಳನ್ನು ಶೈಕ್ಷಣಿಕವಾಗಿ ಬಲವರ್ಧನೆಗೊಳಿಸುವತ್ತ ದಿಟ್ಟ ಹೆಜ್ಜೆ ಇಡುತ್ತಿದೆ ಎಂದರು.
ದೇಗುಲದ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್ ಇದ್ದರು.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಒತ್ತಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422