ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | ELECTION NEWS | 27 DECEMBER 2020
ಗ್ರಾಮ ಪಂಚಾಯಿತಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ಹಂತದ ಚುನಾವಣೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದೆ. ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ.
ಬಹುತೇಕ ಕಡೆಯಲ್ಲಿ ಮತದಾನ ಪ್ರಕ್ರಿಯ ನೀರಸವಾಗಿದೆ. ಬೆರಳೆಣಿಕೆಯಷ್ಟು ಮತದಾರರು ಮಾತ್ರ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. 10 ಗಂಟೆ ಬಳಿಕ ಮತದಾನ ಬಿರುಸು ಪಡೆದುಕೊಳ್ಳುವ ಸಂಭವವಿದೆ.
ಎರಡನೇ ಹಂತದ ಹೈಲೈಟ್ಸ್
- ಹೊಸನಗರ, ಸಾಗರ, ಶಿಕಾರಿಪುರ, ಸೊರಬದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿದೆ.
- ನಾಲ್ಕು ತಾಲೂಕಿನ 131 ಗ್ರಾಮ ಪಂಚಾಯಿತಿಗಳಿಗೆ ಇವತ್ತು ಚುನಾವಣೆ ನಡೆಯುತ್ತಿದೆ.
- ಶಿಕಾರಿಪುರದಲ್ಲಿ 1064, ಸೊಬರದಲ್ಲಿ 826, ಸಾಗರದಲ್ಲಿ 1008, ಹೊಸನಗರದ 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
- ನಾಲ್ಕು ತಾಲೂಕಿನಲ್ಲಿ 773 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 3,404 ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
- 2.20 ಲಕ್ಷ ಪುರುಷರು, 2.17 ಮಹಿಳೆಯರು ಸೇರಿ ಒಟ್ಟು 4.37 ಲಕ್ಷ ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.
- ಚುನಾವಣಾ ಪ್ರಕ್ರಿಯೆಗಾಗಿ 140 ಬಸ್, 66 ಜೀಪು, 29 ಸೆಕ್ಟರ್ ಜೀಪ್, ಎರಡು ಲಾಂಚ್‍ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200