ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಲೈವ್.ಕಾಂ | ELECTION NEWS | 26 DECEMBER 2020
ಗ್ರಾಮ ಪಂಚಾಯಿತಿಗೆ ಎರಡನೇ ಹಂತದ ಚುನಾವಣೆ ನಾಳೆ ನಡೆಯಲಿದೆ. ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಚುನಾವಣೆ ನಡೆಯಲಿದೆ. ಇಲ್ಲಿನ 131 ಗ್ರಾಮ ಪಂಚಾಯಿತಿ 1,397 ಸ್ಥಾನಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. 4.37 ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 2.20 ಲಕ್ಷ ಪುರುಷ, 2.16 ಲಕ್ಷ ಮಹಿಳಾ ಮತದಾರರಿದ್ದಾರೆ.
ಮತಗಟ್ಟೆಯತ್ತ ಅಧಿಕಾರಿಗಳು
ಇವತ್ತು ಮತಗಟ್ಟೆಗಳತ್ತ ಅಧಿಕಾರಿಗಳ ತಂಡ ತೆರಳಿದೆ. ಮತ ಎಣಿಕೆ ಕೇಂದ್ರಗಳಿಂದ ಅಧಿಕಾರಿಗಳು ಮತಗಟ್ಟೆಗಳಿಗೆ ತೆರಳಿದ್ದು, ಬೆಳಗ್ಗೆ ಮತದಾನಕ್ಕೆ ಸಂಪೂರ್ಣ ಸಿದ್ಧತೆ ಮಾಡಲಾಗುತ್ತಿದೆ.
ಪರಿಶೀಲನೆ ನಡೆಸಿದ ಡಿಸಿ, ಎಡಿಸಿ
ಇನ್ನು, ಚುನಾವಣೆ ಕಾರ್ಯದ ಕುರಿತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಅನುರಾಧ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೊರಬ, ಶಿಕಾರಿಪುರದ ಸ್ಟ್ರಾಂಗ್ ರೂಂಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಅಪರ ಜಿಲ್ಲಾಧಿಕಾರಿ ಅನುರಾಧ ಅವರು ಸಾಗರದಲ್ಲಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಬಿಗಿ ಭದ್ರತೆ
ಚುನಾವಣೆ ಸಂದರ್ಭ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಭದ್ರತಾ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು. ಸಾಗರ ತಾಲೂಕಿನ ಸ್ಟ್ರಾಂಗ್ ರೂಂಗೆ ತೆರಳಿ ಪರಿಶೀಲಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]