ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗುಡ್‌ ನ್ಯೂಸ್‌

SHIMOGA NEWS, 29 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣದ (Airport) ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಅನುದಾನ ಬಿಡುಗಡೆಗೆ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆಗೆ ಸರ್ಕಾರ ಒಪ್ಪಿಗೆ ನೀಡಿದೆ.

ಸೋಗಾನೆಯಲ್ಲಿರುವ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣದ ಅಭಿವೃದ್ಧಿಗೆ 127.4 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಿದೆ ಎಂದು ತಿಳಿಸಲಾಗಿದೆ.

Indigo-ATR-Flight-in-Shivamogga-Airport-Shimoga-Live-news.webp

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ನಿರ್ವಹಣೆ ಮಾಡುತ್ತಿದೆ. ರಾಜ್ಯ ಸರ್ಕಾರ ನಿರ್ವಹಿಸುತ್ತಿರುವ ಏಕೈಕ ವಿಮಾನ ನಿಲ್ದಾಣ ಇದಾಗಿದೆ. ನೈಟ್‌ ಲ್ಯಾಂಡಿಂಗ್‌ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ಇಲ್ಲಿ ನಡೆಯುತ್ತಿವೆ. ಈಚೆಗಷ್ಟೆ ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್‌ ಅವಧಿಯನ್ನು ಕೇಂದ್ರ ವಿಮಾನಯಾನ ಪ್ರಾಧಿಕಾರವು (ಡಿಜಿಸಿಎ) ಒಂದು ವರ್ಷಕ್ಕೆ ನವೀಕರಣ ಮಾಡಿತ್ತು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ಶುರು

RED-LINE

Shimoga Airport to receive additional ₹127.4 crore for development, approved by State Cabinet. KSIIDC to oversee upgrades, including night landing facilities

Indigo-ATR-Flight-in-Shivamogga-Airport-Shimoga-Live-news.webp

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment