ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 8 ಜನವರಿ 2020
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಈಗ ಚುರುಕು ಮುಟ್ಟಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BIAL) ಅಧಿಕಾರಿಗಳ ತಂಡ, ಸೋಗಾನೆಗೆ ಭೇಟಿ ನೀಡಿತ್ತು. ವಿಮಾನ ನಿಲ್ದಾಣದ ಕಾಮಗಾರಿ ಆರಂಭದ ಕುರಿತು ಪರಿಶೀಲನೆ ನಡೆಸಿದರು.
ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತು ಅಧಿಕಾರಿಗಳ ತಂಡ ವಿಮಾನ ನಿಲ್ದಾಣದ ಜಾಗವನ್ನು ಪರಿಶೀಲನೆ ನಡೆಸಿತು. ಅಲ್ಲದೆ ರನ್ ವೇ ಕುರಿತ ಗೊಂದಲ ನಿವಾರಣೆಗೆ ಚರ್ಚೆ ನಡೆಸಿತು.
ವಿಮಾನ ನಿಲ್ದಾಣಕ್ಕೆ ಮೀಸಲಾಗಿರುವ ಜಾಗದಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಒಂದಷ್ಟು ಸಲಹೆ ನೀಡಿದರು.
ರನ್ ವೇ ಮತ್ತಷ್ಟು ಉದ್ದ
ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ವಿಮಾನ ನಿಲ್ದಾಣದ ರನ್ ವೇಯನ್ನು 1200 ಮೀಟರ್’ನಿಂದ 2200 ಮೀಟರ್’ಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ದೊಡ್ಡ ವಿಮಾನಗಳು ಲ್ಯಾಂಡಿಂಗ್ ಆಗಲು ಅನುಕೂಲವಾಗಲಿದೆ. ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ 130 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422