ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯಲ್ಲಿ ಮಂಗಳವಾರ 22 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ.
ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನ 11, ಭದ್ರಾವತಿಯ 4, ಸಾಗರದ 3, ಹೊಸನಗರದ 1 ಮತ್ತು ಇತರೆ ಜಿಲ್ಲೆಯಿಂದ ಬಂದಿರುವ ಮೂವರು ಸೋಂಕಿತರಿದ್ದಾರೆ.
ಎರಡು ಸಾವಿರಕ್ಕೂ ಹೆಚ್ಚು ಸ್ಯಾಂಪಲ್
ಮಂಗಳವಾರ ಎರಡು ಸಾವಿರಕ್ಕೂ ಹೆಚ್ಚು ಸ್ಯಾಂಪಲ್ ಸಂಗ್ರಹಿಸಲಾಗಿದೆ. ಜಿಲ್ಲೆಯಾದ್ಯಂತ 536 ವಿದ್ಯಾರ್ಥಿಗಳು ಸೇರಿ 2606 ಮಂದಿಯ ಸ್ಯಾಂಪಲ್ ಸಂಗ್ರಹಿಸಿಲಾಗಿದೆ. 1882 ಸ್ಯಾಂಪಲ್‍ಗಳು ನೆಗಟಿವ್ ಬಂದಿದೆ.
ಚಿಕಿತ್ಸೆಯಲ್ಲಿರುವ ಸೋಂಕಿತರ ಸಂಖ್ಯೆ ಹೆಚ್ಚಳ
ಸೋಂಕಿತರ ಸಂಖ್ಯೆ ಹೆಚ್ಚಳವಾದಂತೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಸಂಖ್ಯೆಯು ಏರಿಕೆಯಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ 170 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 67 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 33 ಮಂದಿ, ಹೋಂ ಐಸೊಲೇಷನ್‍ನಲ್ಲಿ 70 ಮಂದಿ ಇದ್ದಾರೆ. ಇನ್ನು ಮಾರ್ಚ್ 30ರಂದು 14 ಮಂದಿ ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200