SHIVAMOGGA LIVE NEWS | 14 ಮಾರ್ಚ್ 2022
ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈ ನಡುವೆ ಮಾರ್ಚ್ 15ರಂದು ನಡೆಯಲಿರುವ ಕೆಲವು ಪರೀಕ್ಷೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಮಾರ್ಚ್ 15ರಂದು ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಿಗದಿಯಾಗಿತ್ತು. ಆ ಪರೀಕ್ಷೆಯನ್ನ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಇನ್ನು, ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಪರೀಕ್ಷೆಗಳು ಪೂರ್ವ ನಿಗದಿಯಂತೆ ನಡೆಯಲಿದೆ. ಶಿವಮೊಗ್ಗದ ಹೆಚ್.ಎಸ್.ಆರ್ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜುಗಳಲ್ಲಿ ಮಂಗಳವಾರ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ | BREAKING | ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ, ಶಾಲೆ, ಕಾಲೇಜಿಗೆ ರಜೆ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200