ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 9 ಜನವರಿ 2020
ಶಿವಮೊಗ್ಗದಲ್ಲಿ ಎಪ್.ಎಂ ರೇಡಿಯೋ ಕೇಂದ್ರ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಭೇಟಿಯಾಗಿ ಈ ಸಂಬಂಧ ಚರ್ಚೆ ನಡೆಸಿದರು.
ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಶಿವಮೊಗ್ಗ ಹೆಸರಾಗಿದೆ. ಹಾಗೆಯೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕಿದೆ. ಇದಕ್ಕೆ ಎಫ್.ಎಂ ಸೂಕ್ತವಾಗಿದ್ದು ಜಿಲ್ಲೆಯಲ್ಲಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿರುವ ದೂರದರ್ಶನ ಕೇಂದ್ರದಲ್ಲಿ ಎಫ್.ಎಂ.ಗಾಗಿ 10ಕೆವಿ ಪ್ರಸರಣ ಟ್ರಾನ್ಸ್’ಮೀಟರ್ ಅಳವಡಿಸಬಹುದು ಎಂದು ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ಮನವಿ ಮಾಡಿದರು. ಇದೇ ವೇಳೆಯಲ್ಲಿ ಜಿಲ್ಲೆಯಲ್ಲಿ ಖಾಸಗಿ ಎಫ್.ಎಂ.ಚಾನೆಲ್’ಗಳ ಆರಂಭಕ್ಕೂ ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422