ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ಮತದಾನವಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020

ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮತದಾನ ಬಿರುಸು ಪಡೆದುಕೊಂಡಿದೆ.

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಎಷ್ಟೆಷ್ಟು ಮತದಾನವಾಗಿದೆ?

ಮೂರು ತಾಲೂಕಿನಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ.46.17ರಷ್ಟು ಮತದಾನವಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಶೇ.46.58, ಭದ್ರಾವತಿಯಲ್ಲಿ ಶೇ.43.64, ತೀರ್ಥಹಳ್ಳಿಯಲ್ಲಿ ಶೇ.48.41ರಷ್ಟು ಮತದಾನವಾಗಿದೆ. ಬೆಳಗ್ಗೆ 11 ಗಂಟೆವರೆಗೆ ಶೇ.24.28ರಷ್ಟು ಮತದಾನವಾಗಿತ್ತು.

ಮಧ್ಯಾಹ್ನದ ಮೇಲೆ ಬಿರುಸು

ಮೊದಲ ಹಂತದ ಚುನಾವಣೆ ಈತನಕ ಶಾಂತಿಯುತವಾಗಿ ನಡೆಯುತ್ತಿದೆ. ಆರಂಭದಲ್ಲಿ ಮತದಾನ ನೀರಸವಾಗಿತ್ತು. ಆದರೆ ಈಗ ಚುರುಕು ಪಡೆದುಕೊಂಡಿದೆ. ಮಧ್ಯಾಹ್ನದ ಮೇಲೆ ಮತದಾನ ಇನ್ನಷ್ಟು ಚುರುಕುಗೊಳ್ಳುವ ಸಾದ್ಯತೆ ಇದೆ.

VIDEO REPORT

615 ಮತಗಟ್ಟೆಯಲ್ಲಿ ಚುನಾವಣೆ

  • ಮೂರು ತಾಲೂಕಿನ 615 ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ.
  • ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯಿತಿಯ 431 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
  • ಶಿವಮೊಗ್ಗ ತಾಲೂಕಿನಲ್ಲಿ ಈಗಾಗಲೇ 24 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
  • 223 ಮತಗಟ್ಟೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದೆ.
  • ಭದ್ರಾವತಿ ತಾಲೂಕಿನ 35 ಗ್ರಾಮ ಪಂಚಾಯಿತಿಯ 375 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ
  • 44 ಮಂದಿ ಭದ್ರಾವತಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
  • 375 ಮತಗಟ್ಟೆಯಲ್ಲಿ ಚುನಾವಣೆ ನಡೆಯುತ್ತಿದೆ.
  • ಇನ್ನು, ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಯ 322 ಸ್ಥಾನಗಳಿಗೆ ಚುನಾವಣೆ ಆಗ್ತಿದೆ.
  • 14 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
  • ತೀರ್ಥಹಳ್ಳಿ ತಾಲೂಕಿನ 322 ಮತಗಟ್ಟೆಯಲ್ಲಿ ಚುನಾಣೆ ನಡೆಯುತ್ತಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment